
ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶ…ಆರೋಪಿ ಬಂಧನ…
- TV10 Kannada Exclusive
- September 26, 2024
- No Comment
- 175

ಹುಣಸೂರು,ಸೆ26,Tv10 ಕನ್ನಡ
ಹುಣಸೂರು ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶಪಡಿಸಿಕೊಂಡಿದ್ದಾರೆ ಠಾಣಾ ವ್ಯಸಪ್ತಿಯ ಕಂಚಿನ ಕೆರೆ ಹೊಸಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಮಹಾದೇವ ನನ್ನು ಬಂಧಿಸಿದ್ದಾರೆ.ಮನೆ ಹಿತ್ತಲಿನಲ್ಲಿ ಬೆಳೆದಿದ್ದ ಸುಮಾರು 3 ಕೆಜಿ 985 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಎನ್ ಮುನಿಯಪ್ಪ ರವರ ನೇತೃತ್ವದಲ್ಲಿ ರತ್ನಪುರಿ ಗ್ರಾಮದ ಪಶು ವೈದ್ಯಾಧಿಕಾರಿಗಳಾದ ಡಾ.ಗಿರೀಶ್ ರವರು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಹಾಗೂ ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಶ್ರೀಧರ್ ಹಾಗೂ ಪೊಲೀಸ್ ಉಪ ನಿರೀಕ್ಷಕರಾದ ರಾಮು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು…