ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮೈಸೂರು,ಅ17,Tv10 ಕನ್ನಡ

ಬಾಡಿಗೆ ನೆಪದಲ್ಲಿ ಚಾಲಕನಿಗೆ ಹಲ್ಲೆ ನಡೆಸಿ ಆಟೋ,ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾದ ಪ್ರಮುಖ ಆರೋಪಿಯನ್ನ ಬಂಧಿಸುವಲ್ಲಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿಯಿಂದ ಆಟೋ ವಶಪಡಿಸಿಕೊಳ್ಳಲಾಗಿದೆ.ಹೂಟಗಳ್ಳಿ ನಿವಾಸಿ ಉಮೇಶ್ (28) ಬಂಧಿತ ಆರೋಪಿ.

ಅಕ್ಟೋಬರ್ 10 ರಂದು ಹೊಸಹುಂಡಿಗೆ ಬಾಡಿಗೆಗೆ ಆರೋಪಿ ಉಮೇಶ್ ಹಾಗೂ ಸಹಚರ ಆಟೋ ಪಡೆದಿದ್ದಾರೆ.ಏಳಿಗೆ ಹುಂಡಿ ತಲುಪುತ್ತಿದ್ದಂತೆಯೇ ಚಾಲಕ ಸಾಗರ್ ಮೇಲೆ ಹಲ್ಲೆ ನಡೆಸಿ ಆಟೋ ಸಮೇತ ಮೊಬೈಲ್,8500/- ರೂ ನಗದು ದೋಚಿ ಪರಾರಿಯಾಗಿದ್ದಾರೆ.ಹಲ್ಲೆಗೊಳಗಾದ ಸಾಗರ್ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳ ಸೆರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ನಾಗೇಶ್ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕರೀಂ ರಾವತರ್ ಉಸ್ತುವಾರಿಯಲ್ಲಿ ದಕ್ಷಿಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಡಾ.ಎಂ.ಎಲ್.ಶೇಖರ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಕೆ.ಎ.ಚಂದ್ರು,ಸಿಬ್ಬಂದಿಗಳಾದ ಮಹೇಶ್,ಸುನಿಲ್ ಕುಮಾರ್,ಮಂಜು,ಪ್ರಕಾಶ್ ರವರನ್ನೊಳಗೊಂಡ ತಂಡ ರಚಿಸಲಾಗಿದ್ದು ಘಟನೆ ನಡೆದ 6 ದಿನಗಳಲ್ಲಿ ಪ್ರಮುಖ ಆರೋಪಿ ಉಮೇಶ್ ನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಉಮೇಶ್ ಮೇಲೆ ಕಳ್ಳತನ,ಸುಲಿಗೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.ದಕ್ಷಿಣ ಪೊಲೀಸ್ ಠಾಣೆಯಲ್ಲಿ 4,ವರುಣಾ ಪೊಲೀಸ್ ಠಾಣೆಯಲ್ಲಿ 2,ನಂಜನಗೂಡು ಪೊಲೀಸ್ ಠಾಣೆಯಲ್ಲಿ 3, ಜಯಪುರ,ಹುಲ್ಲಹಳ್ಳಿ ಹಾಗೂ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

ದಕ್ಷಿಣ ಪೊಲೀಸ್ ಠಾಣೆಯ ಯಶಸ್ವಿ ಕಾರ್ಯಾಚರಣೆಯನ್ನ ಎಸ್ಪಿ ವಿಷ್ಣುವರ್ಧನ್ ಶ್ಲಾಘಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *