ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ

ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ


ಮೈಸೂರು,ಅ23,Tv10 ಕನ್ನಡ

ಮೈಸೂರಿನ ಸತ್ಯವತಿ ವಿಜಯ ರಾಘವಾಚಾರ್ ಛಾರಿಟಬಲ್ ಟ್ರಸ್ಟ್ ವತಿಯಿಂದ, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ದತ್ತಿ ನಿಧಿಗೆ 2.5 ಲಕ್ಷ ಹಣವನ್ನು ದೇಣಿಗೆ ರೂಪದಲ್ಲಿ ನೀಡ ಲಾಯಿತು. ಹಲವಾರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಕಾರ್ಯಪ್ರವೃತ್ತರಾಗಿರುವ ಡಾ.ಎ.ಪುಷ್ಪ ಅಯ್ಯಂಗಾರ್ ಮತ್ತು ಎ.ವೈದೇಹಿ ಅಯ್ಯಂಗಾರ್ ಸಹೋದರಿಯರ ನೇತೃತ್ವದಲ್ಲಿ ಬುಧವಾರ ದೇಣಿಗೆಯ ಚೆಕ್ ಅನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಎಸ್.ಅಹಲ್ಯಾ ಅವರಿಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಹಸ್ತಾಂತರಿಸಲಾಯಿತು.
ಈ ವೇಳೆ ಡಾ.ಎ.ಪುಷ್ಪ ಅಯ್ಯಂ ಗಾರ್ ಮತ್ತು ಎ.ವೈದೇಹಿ ಅಯ್ಯಂ ಗಾರ್ ಅವರು ಮಾತನಾಡಿ, ಕನ್ನಡ ಸೇವೆಗೆ ನಮ್ಮ ಜೀವನ ಮುಡಿಪಾಗಿದೆ. ಈವರೆಗೂ ನಮ್ಮ ತಂದೆ-ತಾಯಿ ಸತ್ಯವತಿ ಹಾಗೂ ವಿಜಯ ರಾಘ ವಾಚಾರ್ ಅವರ ಹೆಸರಿನಲ್ಲಿ ಇಂತಹ ಸೇವೆಗಳನ್ನು ಮಾಡಿಕೊಂಡು ಬರಲಾ ಗುತ್ತಿದೆ.ಅದರಲ್ಲೂ ಆಹಾರ, ಅಕ್ಷರ ಮತ್ತು ಆರೋಗ್ಯಕ್ಕೆ ಉತ್ತೇಜನ ನೀಡುವುದೇ ನಮ್ಮ ಮೂಲ ಉದ್ದೇಶವಾಗಿದ್ದು, ಯಾವುದೇ ಜಾತಿ-ಮತ ಬೇಧವಿಲ್ಲದೇ ಉತ್ತೇಜನ ನೀಡಿ, ಮುಂದಿನ ದಿನಗಳಲ್ಲೂ ಎಲ್ಲಾ ಸಂಘ ಸಂಸ್ಥೆಗಳಿಗೂ ಈ ಕಾರ್ಯವನ್ನು ವಿಸ್ತರಿಸಿಕೊಂಡು ಮುಂದುವರೆಸಿಕೊಂಡು ಹೋಗುವುದಾಗಿ ನುಡಿದರು.

ಈ ಸಂದರ್ಭದಲ್ಲಿ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *