ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆ…ಚೈನ್ ಸ್ನಾಚರ್ ಬಂಧನ…2.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆ…ಚೈನ್ ಸ್ನಾಚರ್ ಬಂಧನ…2.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಮೈಸೂರು,ಅ23,Tv10 ಕನ್ನಡ

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಸರಗಳ್ಳನನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 40 ಗ್ರಾಂ ತೂಕದ ಎರಡು ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಹೋಂಡಾ ಆಕ್ಟಿವಾ ವಶಪಡಿಸಿಕೊಂಡಿದ್ದಾರೆ.ಚಾಮರಾಜನಗರ ನಿವಾಸಿ ವಿನಯ್ ಕುಮಾರ್ (27) ಬಂಧಿತ ಆರೋಪಿ.

18-10-2024 ರಂದು ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಧುವನ ಬಡಾವಣೆ ಬಳಿ ಮಹಿಳೆ ಕಮಲ ಎಂಬುವರು ನಡೆದುಕೊಂಡು ಹೋಗುತ್ತಿದ್ದಾಗ ಹೋಂಡಾ ಆಕ್ಟಿವಾದಲ್ಲಿ ಬಂದ ವಿನಯ್ ಕುಮಾರ್ 30 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾನೆ.ಈ ಕುರಿತಂತೆ ಕಮಲ ರವರು ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕೂಡಲೇ ಕಾರ್ಯೋನ್ಮುಖರಾದ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಗಳನ್ನ ಪರಿಶೀಲನೆ ನಡೆಸಿ ಆರೋಪಿಯನ್ನ ಸೆದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯ ಬಂಧನಕ್ಕೆ ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ, ಕೃಷ್ಟರಾಜ ವಿಭಾಗದ ಎಸಿಪಿ ರಮೇಶ್ ಕುಮಾರ್ ಉಸ್ತುವಾರಿಯಲ್ಲಿ ಇನ್ಸ್ಪೆಕ್ಟರ್ ಅರುಣ್ ಎಲ್ ಹಾಗೂ ಪಿಎಸ್ಸೈ ಗೋಪಾಲ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಆನಂದ್,ಮಂಜುನಾಥ್,ಮಹೇಶ್ವರ್,ಮಂಜು,ನಾಗೇಶ್,ಯಶವಂತ್,ಹಜರತ್ ಹಾಗೂ ಸುರೇಶ್ ರವರನ್ನೊಳಗೊಂಡ ತಂಡ ರಚಿಸಿದ್ದು ಘಟನೆ ನಡೆದ ಎರಡು ದಿನಗಳಲ್ಲಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಯಿಂದ 70 ಸಾವಿರ ಮೌಲ್ಯದ ಹೋಂಡಾ ಆಕ್ಟಿವಾ ಹಾಗೂ 2.80 ಲಕ್ಷ ಮೌಲ್ಯದ ಎರಡು ಚಿನ್ನದ ಸರಗಳನ್ನ ವಶಪಡಿಸಿಕೊಳ್ಳಲಾಗಿದೆ.

ಪತ್ತೆ ಕಾರ್ಯವನ್ನ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಹಾಗೂ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರವರು ಪ್ರಶಂಸಿಸಿರುತ್ತಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *