ಗ್ರಾಮದಲ್ಲೇ ರಾಜಿ ಮಾಡಿಕೊಳ್ಳದೆ ಪೊಲೀಸರ ಮೊರೆ ಹೋದ ಕುಟುಂಬದ ಮೇಲೆ ಸಾಮಾಜಿಕ ಬಹಿಷ್ಕಾರ…ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆಗೆ ನಿರ್ಧಾರ…

ಗ್ರಾಮದಲ್ಲೇ ರಾಜಿ ಮಾಡಿಕೊಳ್ಳದೆ ಪೊಲೀಸರ ಮೊರೆ ಹೋದ ಕುಟುಂಬದ ಮೇಲೆ ಸಾಮಾಜಿಕ ಬಹಿಷ್ಕಾರ…ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆಗೆ ನಿರ್ಧಾರ…

ಚಾಮರಾಜನಗರ,ಅ24,Tv10 ಕನ್ನಡ

ಗಲಾಟೆ ವಿಚಾರಕ್ಕೆ ಸಂಭಂಧಿಸಿದಂತೆ ಕುಟುಂಬವೊಂದು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋದ ಹಿನ್ನಲೆ ಗ್ರಾಮದ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜನಗರ ಜಿಲ್ಲೆ ಹರದನಹಳ್ಳಿ ಹೋಬಳಿ ಕಿಲಗೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ಎರಡು ವರ್ಷಗಳ ಹಿಂದೆ ಹೇರಿದ ಬಹಿಷ್ಕಾರದಿಂದ ನೊಂದಿರುವ ಕುಟುಂಬ ನ್ಯಾಯಕ್ಕಾಗಿ ಅಲೆದು ಹೈರಾಣರಾಗಿದ್ದಾರೆ.ನ್ಯಾಯ ದೊರೆಯದಿದ್ದಲ್ಲಿ ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ.

ಕಿಲಗೆರೆ ಗ್ರಾಮದ ಸಿದ್ದರಾಜು ಕುಟುಂಬದ ಮೇಲೆ ಗ್ರಾಮದ ಮುಖಂಡರಾದ ಮಲ್ಲಯ್ಯ,ಮಸಣಯ್ಯ,ಬಸವರಾಜು,ಚೆನ್ನಯ್ಯ,ಬಸವಯ್ಯ ಹಾಗೂ ಇತರರು ಕ್ಷುಲ್ಲಕ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ ಹೇರಿದ್ದಾರೆ.ಮಗಳ ವಿಚಾರದಲ್ಲಿ ಗ್ರಾಮದಲ್ಲಿ ಗಲಾಟೆ ಆಗಿದೆ.ಈ ವೇಳೆ ನ್ಯಾಯಕ್ಕಾಗಿ ಸಿದ್ದರಾಜು ಗ್ರಾಮದ ಪಂಚಾಯ್ತಿ ಗಮನಕ್ಕೆ ತರದೆ ನೇರವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಹೀಗಾಗಿ ಮುಖಂಡರು ಬಹಿಷ್ಕಾರದ ಶಿಕ್ಷೆ ಹೇರಿದ್ದಾರೆ.ಗ್ರಾಮದಲ್ಲಿ ಈ ಕುಟುಂಬವನ್ನ ಮಾತನಾಡಿದ್ರೆ 5 ಸಾವಿರ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಕುಡಿಯಲು ನೀರು ಕೊಡುವಂತಿಲ್ಲ,ಅಂಗಡಿಗಳಲ್ಲಿ ಪದಾರ್ಥ ಮಾರುವಂತಿಲ್ಲ,ಶಾಲೆಗೆ ಹೋಗುವಂತಿಲ್ಲ ಹೀಗೆ ಹಲವು ಷರತ್ತುಗಳನ್ನ ಹಾಕಿ ಇಡೀ ಕುಟುಂಬಕ್ಕೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.ನಮಗೆ ಕಾನೂನು ರಕ್ಷಣೆ ಬೇಕು ಹಾಗೂ ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಮತ್ತು ನಮ್ಮ ಮೇಲೆ ದೌರ್ಜನ್ಯವೆಸಗುತ್ತಿರುವವರಿಗೆ ಶಿಕ್ಷೆ ನೀಡಿ ಗ್ರಾಮದಲ್ಲಿ ನೆಮ್ಮದಿಯಿಂದ ವಾಸ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *