ರಸ್ತೆಬದಿ ನಿಂತಿದ್ದ ಬೈಕ್ ಹಾಗೂ ಪಾದಚಾರಿಗಳಿಗೆ ಅಪರಿಚಿತ ಕಾರು ಢಿಕ್ಕಿ ಓರ್ವ ಮಹಿಳೆ ಸಾವು…ಐವರಿಗೆ ಗಂಭೀರ ಗಾಯ…

ರಸ್ತೆಬದಿ ನಿಂತಿದ್ದ ಬೈಕ್ ಹಾಗೂ ಪಾದಚಾರಿಗಳಿಗೆ ಅಪರಿಚಿತ ಕಾರು ಢಿಕ್ಕಿ ಓರ್ವ ಮಹಿಳೆ ಸಾವು…ಐವರಿಗೆ ಗಂಭೀರ ಗಾಯ…

ನಂಜನಗೂಡು,ನ15,Tv10 ಕನ್ನಡ
ರಸ್ತೆ ಬದಿ ನಿಂತಿದ್ದ ಬೈಕ್‌ಗಳು ಹಾಗೂ ಪಾದಾಚಾರಿಗಳಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ
ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು
ಐವರು ಗಂಭೀರವಾಗಿ ಗಾಯಗೊಂಡ ಘಟನೆ
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದ ಲಕ್ಷ್ಮಣ ಎಂಬುವವರ ಪತ್ನಿ ಮಂಜುಳಾ (32) ಮೃತ ದುರ್ದೈವಿ.
ಲಕ್ಷ್ಮಣ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ದೊಡ್ಡ ಕವಲಂದೆ ಗ್ರಾಮದ ಬ್ಯಾಂಕಿಗೆ ಖಾತೆ ತೆರೆಯಲು ತೆರಳಿದ್ದರು.
ಈ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನಂಜನಗೂಡು ಕಡೆಯಿಂದ ಚಾಮರಾಜನಗರ ಕಡೆಗೆ ಅತಿ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ.
ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಲಕ್ಷ್ಮಣ, ಸಿಂಧು, ಶಿವ ಮಲ್ಲು, ನೇಹರ್, ರಾಜಪ್ಪ ಹಾಗೂ ಮೃತ ಮಹಿಳೆಯ ಮಕ್ಕಳೂ ಸಹ ಗಂಭೀರ ಗಾಯಗೊಂಡಿದ್ದಾರೆ.
ಅಪರಿಚಿತ ವಾಹನದ ಕಾರಿನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಾಯಾಳುಗಳು ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *