ಟೋಲ್ ನಲ್ಲಿ ರಾಜಕೀಯ ಪುಡಾರಿಗಳ ಪುಂಡಾಟ…ಮಹಿಳಾ ಸಿಬ್ಬಂದಿಯನ್ನ ಎಳೆದಾಡಿ ರಂಪಾಟ…

ಟೋಲ್ ನಲ್ಲಿ ರಾಜಕೀಯ ಪುಡಾರಿಗಳ ಪುಂಡಾಟ…ಮಹಿಳಾ ಸಿಬ್ಬಂದಿಯನ್ನ ಎಳೆದಾಡಿ ರಂಪಾಟ…

ಮಂಡ್ಯ,ನ22,Tv10 ಕನ್ನಡ

ಬೆಂಗಳೂರು ಮೈಸೂರು ಹೈವೇ ಟೋಲ್ ನಲ್ಲಿ ರಾಜಕೀಯ ಪುಡಾರಿಗಳು ನಡೆಸಿದ ಪುಂಡಾಟ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಟೋಲ್ ದುಡ್ಡು ಕಟ್ಟದೇ ಸಿಬ್ಬಂದಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ.
ಟೋಲ್ ಕಟ್ಟಿ ಎಂದಿದ್ದಕ್ಕೆ ಕ್ಯಾತೆ ಜಗಳ ತೆಗೆದಿದ್ದಾರೆ.ಕೈ ಮುಖಂಡರೊಬ್ಬರಿಂದ ಪುಂಡಾಟಿಕೆ ನಡೆದಿದೆ.
ಕೊನೆಗೆ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೊಣಂಗೂರು ಟೋಲ್ ನಲ್ಲಿ ಘಟನೆ ನಡೆದಿದೆ.
KA 06 M 8164 ನಂಬರ್ ನ ಕಾರಿನಲ್ಲಿ ಮೈಸೂರು ಕಡೆಗೆ ಹೊರಟಿದ್ದ ಕಾರು.
ಕಾಂಗ್ರೆಸ್ ಪಕ್ಷದ ಪದಾಧಿಕಾರಿ ಎಂದು ಕಾರಿನಲ್ಲಿ ನೇಮ್ ಬೋರ್ಡ್‌ ನಮೂದಿಸಲಾಗಿದೆ.
ಟೋಲ್ ಶುಲ್ಕ ಪಾವತಿಸಲು ನಿರಾಕರಿಸಿದ್ದಾರೆ.
ಕಾರು ಬಿಡದಿದ್ದಕ್ಕೆ ಕೆಳಗಿಳಿದ ಕೈ ಮುಖಂಡ ಆವಾಜ್ ಹಾಕಿದ್ದಾನೆ.
ಟೋಲ್ ಅಮೌಂಟ್ ಕಟ್ಟಲೇಬೇಕು ಎಂದು ಸಿಬ್ಬಂದಿಗಳು ಪಟ್ಟು ಹಿಡಿದಿದ್ದಾರೆ.
ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.ಈ ವೇಳೆ ಟೋಲ್ ನ ಮಹಿಳಾ ಸಿಬ್ಬಂದಿಯ ಜುಟ್ಟು ಹಿಡಿದು ಎಳೆದಾಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನ ನಿಯಂತ್ರಿಸಿದ್ದಾರೆ.
ದೂರನ್ನು ದಾಖಲಿಸಿಕೊಳ್ಳದೆ ಅವರನ್ನ ಸ್ಥಳದಿಂದ ಕಳುಹಿಸಿಕೊಟ್ಟಿದ್ದಾರೆ.
ಶ್ರೀರಂಗಪಟ್ಟಣ ‌ಗ್ರಾಮಾಂತರ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *