ಸರಸ್ವತಿಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಖತರ್ನಾಕ್ ಕಳ್ಳನ ಬಂಧನ…5.13 ಲಕ್ಷ ಮೌಲ್ಯದ ಚಿನ್ನಾಭರಣ,ದ್ವಿಚಕ್ರ ವಾಹನ ವಶ…

ಸರಸ್ವತಿಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಖತರ್ನಾಕ್ ಕಳ್ಳನ ಬಂಧನ…5.13 ಲಕ್ಷ ಮೌಲ್ಯದ ಚಿನ್ನಾಭರಣ,ದ್ವಿಚಕ್ರ ವಾಹನ ವಶ…

ಮೈಸೂರು,ನ27,Tv10 ಕನ್ನಡ

ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತು ಪರಾರಿಯಾದ ಖತರ್ನಾಕ್ ಕಳ್ಳನನ್ನ ಬಂಧಿಸುವಲ್ಲಿ ಸರಸ್ವತಿಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 5 ದ್ವಿಚಕ್ರ ವಾಹನ ಸೇರಿದಂತೆ 5,13,200/- ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಖತರ್ನಾಕ್ ಕಳ್ಳನ ವಿರುದ್ದ ಈಗಾಗಲೇ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 40 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.ಚಂದ್ರು.ಆ.ಕಬ್ಬಾಳ್ (35) ಬಂಧಿತ ಆರೋಪಿ.

ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನ ಇಬ್ಬರು ಖದೀಮರು ಕಿತ್ತು ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡ ಸರಸ್ವತಿಪುರಂ ಠಾಣೆ ಪೊಲೀಸರು ಖದೀಮರ ಬಂಧನಕ್ಕೆ ಜಾಲ ಬೀಸಿದ್ದರು.ಖಚಿತ ಮಾಹಿತಿ ಆಧರಿಸಿ ಬೋಗಾದಿ ರಿಂಗ್ ರಸ್ತೆ ಬಳಿ ಆರೋಪಿ ಚಂದ್ರು.ಆ.ಕಬ್ಬಾಳ್ ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನಿಂದ 2.62 ಲಕ್ಷ ಮೌಲ್ಯದ 43 ಗ್ರಾಂ ಚಿನ್ನದ ಸರ ಹಾಗೂ 2.51 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ಮಾರ್ಗದರ್ಶನದಲ್ಲಿ ವಿಜಯನಗರ ಉಪವಿಭಾಗದ ಎಸಿಪಿ ಗಜೇಂದ್ರಪ್ರಸಾದ್ ಉಸ್ತುವಾರಿಯಲ್ಲಿ ಸರಸ್ವತಿಪುರಂ ಠಾಣೆ ಇನ್ಸ್ಪೆಕ್ಟರ್ ಪುರುಷೋತ್ತಮ್ ,ಪಿಎಸ್ಸೈ ರವರಾದ ಲತಾ ಹಾಗೂ ಮಹೇಂದ್ರ ಟಿ ಎಸ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮೋಹನ್ ಕುಮಾರ್,ಕುಮಾರ್,ಸುಧೀಪ್ ಕುಮಾರ್,ರಕ್ಷಿತ್ ಕುಮಾರ್,ಚಂದ್ರಶೇಖರ್,ರಾಜೇಶ್,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಹಾಗೂ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *