ದೇವಸ್ಥಾನದಲ್ಲಿ ಕಳ್ಳರ ಕೈಚಳಕ…ಹುಂಡಿ ಹಣ ಕದ್ದೊಯ್ದ ಖದೀಮರು…
- CrimeTV10 Kannada Exclusive
- December 6, 2024
- No Comment
- 14
ನಂಜನಗೂಡು,ಡಿ6,Tv10 ಕನ್ನಡ
ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಹುಂಡಿ ಹಣ ಕದ್ದೊಯ್ದ ಘಟನೆ
ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದ
ಬೀಗ ಮುರಿದು ಹುಂಡಿ ಹೊಡೆದು ಕಳ್ಳತನ ಮಾಡಲಾಗಿದೆ.
ಸುಮಾರು 1 ಲಕ್ಷಕ್ಕೂ ಹೆಚ್ಚು ಹಣ ಕಳ್ಳರ ಪಾಲಾಗಿದೆ. ಮೂರನೇ ಬಾರಿಗೆ ಈ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.ಕಳ್ಳರನ್ನು ಪತ್ತೆ ಹಚ್ಚುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ.
ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…