ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ಸರಗಳ್ಳಿಯ ಬಂಧನ…3.90 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ಸರಗಳ್ಳಿಯ ಬಂಧನ…3.90 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಮೈಸೂರು,ಡಿ6,Tv10 ಕನ್ನಡ

ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಮಹಿಳೆಯರ ಚಿನ್ನದ ಸರ ಕಳುವು ಮಾಡುತ್ತಿದ್ದ ಸರಗಳ್ಳಿಯನ್ನ ಬಂಧಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತಳಿಂದ 3.90 ಲಕ್ಷ ಮೌಲ್ಯದ ಒಟ್ಟು 54 ಗ್ರಾಂ ತೂಕದ ಎರಡು ಚಿನ್ನದ ಸರಗಳನ್ನ ವಶಪಡಿಸಿಕೊಂಡಿದ್ದಾರೆ.ಕೆ.ಆರ್.ನಗರ ಮೂಲದ ಲತಾ ಸಿಕ್ಕಿಬಿದ್ದ ಸರಗಳ್ಳಿ.

ಇತ್ತೀಚೆಗೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸರಗಳ್ಳತನ ಪ್ರಕರಣ ನಡೆದಿತ್ತು.ಆರೋಪಿಯ ಬಂಧನಕ್ಕೆ ಲಷ್ಕರ್ ಠಾಣೆ ಪೊಲೀಸರು ತಂಡ ರಚಿಸಿದ್ದರು.ಗ್ರಾಮಾಂತರ ಬಸ್ ನಿಲ್ದಾಣದಲ್ಲೇ ಸಿಕ್ಕಿಬಿದ್ದ ಆರೋಪಿ ಲತಾಳನ್ನ ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಸರಗಳುವು ಮಾಡಿರುವುದಾಗಿ ಒಪ್ಪಿಕೊಂಡಿದ್ದಳು.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆಯ ಇನ್ಸ್ಪೆಕ್ಟರ್ ಪ್ರಸಾದ್ ಕೆ.ಆರ್. ಪಿಎಸ್ಸೈ ಗಳಾದ ಕು.ರಾಧಾ,ಅನಿಲ್ ಕುಮಾರ್ ನೇತೃತ್ವದಲ್ಲಿ ಎಎಸ್ಸೈ ಲೋಕೇಶ್ ಸಿಬ್ಬಂದಿಗಳಾದ ಸುರೇಶ್,ರವಿಕುಮಾರ್,ಗಿರೀಶ್,ಮಂಜುನಾಥ್,ಚೌಡಪ್ಪ ಪಾಸೀಗರ್,ಅಬ್ದುಲ್ ರೆಹಮಾನ್,ಚಿಕ್ಕಣ್ಣ ಸ್ವಾಮಿ,ಅಶ್ವಿನಿ ಹಳವಾರ ರವರು ಆರೋಪಿಯ ಬಂಧನ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ.

ಕಾರ್ಯಾಚರಣೆಯನ್ನ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ,ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರವರು ಶ್ಲಾಘಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *