ಸರೋಜಿನಿ ಮಹಿಷಿ ವರದಿ ಶೀಘ್ರ ಅನುಷ್ಠಾನವಾಗಲಿ…87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಆಗ್ರಹ…
- TV10 Kannada Exclusive
- December 20, 2024
- No Comment
- 12
ಮಂಡ್ಯ,ಡಿ20,Tv10 ಕನ್ನಡ
ಸಕ್ಕರೆ ನಾಡಿನಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೊಳಗಿದೆ.ಎಲ್ಲೆಲ್ಲೂ ಕನ್ನಡ ಕಂಪು ಪಸರಿಸುತ್ತಿದೆ.ಸಾಹಿತ್ಯ ಸಮ್ಮೇಳನವನ್ನ ಉದ್ಘಾಟಿಸಿ ಮಾತನಾಡಿದ ಅಧ್ಯಕ್ಷರಾದ
ಗೊ.ರೂ.ಚೆನ್ನಬಸ್ಸಪ್ಪ ಕನ್ನಡ ಭಾಷೆಯ ರಕ್ಷಣೆ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ಕಿವಿಮಾತು ಹೇಳಿದ್ದಾರೆ.ಭಾಷಣದ ಉದ್ದಕ್ಕೂ ಕನ್ನಡದ ಉಳಿವು ಹಾಗೂ ಏಳಿಗೆ ಬಗ್ಗೆ ಸಲಹೆಗಳನ್ನ ನೀಡಿದ್ದಾರೆ.ಕನ್ನಡವು ಕಾವ್ಯ, ಕವನ, ನಾಟಕ, ಕಾದಂಬರಿ, ವ್ಯಾಕರಣ ಮುಂತಾದ ಪರಂಪರೆಯ ಸಾಹಿತ್ಯಕ್ಕೆ ಸೀಮಿತವಾಗಿ ಉಳಿದಿಲ್ಲ.ವಿಜ್ಞಾನ, ತಂತ್ರಜ್ಞಾನ, ಕಾನೂನು, ವೈದ್ಯಕೀಯ ಮುಂತಾದ ಕ್ಷೇತ್ರದಲ್ಲಿ ಕನ್ನಡ ಬೆಳೆಯುತ್ತಿದೆ.ಈ ಸಂಧರ್ಭದಲ್ಲಿ
ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೈಂಕರ್ಯದಲ್ಲಿ ಉದ್ಯಮಿಗಳು, ಸ್ವಯಂ ಸೇವಾ ಸಂಸ್ಥೆಗಳು, ವಿದೇಶಿ ಕನ್ನಡಿಗರು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕನ್ನಡ ಭಾಷೆಯ ಬೆಳವಣಿಗೆಗೆ ತಂತ್ರಜ್ಞಾನದ ಪೋಷಣೆ ಅತ್ಯಗತ್ಯ.ಗೂಗಲ್, ಯಾಂತ್ರಿಕ ಬುದ್ಧಿಮತ್ತೆಗೂ ಬರಲಿ ಶುದ್ಧ ಕನ್ನಡ ಪ್ರೇಮ.
ಜ್ಞಾನ ಪಡೆಯುವ ತಂತ್ರಜ್ಞಾನಕ್ಕೆ ಕನ್ನಡವನ್ನು ಹೊಂದಿಸಿದರೆ ಕನ್ನಡ ಜ್ಞಾನದ ಭಾಷೆ ಆಗುತ್ತದೆ.
ಜನಪ್ರಧಿನಿಧಿಗಳಲ್ಲಿ, ಉನ್ನತ ಅಧಿಕಾರಿಗಳಲ್ಲಿ ಕನ್ನಡ ಭಾಷಾ ಪ್ರೇಮದ ಕೊರತೆ ಇರುವಂತೆ ಕಾಣುತ್ತದೆ.ಕನ್ನಡ ಸಾಹಿತ್ಯ ಪರಿಷತ್ತು ಬೇರೆ ಬೇರೆ ಭಾಷೆಗಳ ಜೊತೆಯಲ್ಲಿ ವಿನಿಮಯ ಕಾರ್ಯಕ್ರಮಗಳನ್ನು ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಕಲೆ, ನಾಟಕ, ಸಂಗೀತ, ಬಯಲಾಟ ಮುಂತಾದವುಗಳನ್ನು ಉತ್ತರ ಭಾರತದ ರಾಜ್ಯಗಳಿಗೆ ಪರಿಚಯಿಸಿಕೊಡುವ ಕೆಲಸ ಆದ್ಯತೆಯ ಮೇಲೆ ಮಾಡಬೇಕುಹಿಂದಿ ಭಾಷೆಯನ್ನು ರಾಷ್ಟ್ರ ಭಾಷೆ ಎಂಬುದನ್ನು ಪ್ರತ್ಯಕ್ಷ, ಪರೋಕ್ಷವಾಗಿ ಹೇರುವ ಹುನ್ನಾರವನ್ನು ಕೇಂದ್ರ ಸರ್ಕಾರಗಳು ಮಾಡುತ್ತಲೇ ಬಂದಿವೆ
ಕನ್ನಡ ವಿಶ್ವವಿದ್ಯಾನಿಲಯಕ್ಕೆ ವಿಶೇಷ ಗಮನ ಹರಿಸಬೇಕು.ಕೇಂದ್ರ ರಾಜ್ಯಗಳ ಹಣಕಾಸು ಸಂಬಂಧದ ಕುರಿತು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಬೇಕು. ಕೇಂದ್ರ ಸರ್ಕಾರ ಸಂವಿಧಾನ ಮತ್ತು ಹಣಕಾಸು ತಜ್ಞರ ಒಂದು ವಿಶೇಷ ಆಯೋಗ ರಚಿಸಬೇಕು.ಹಬ್ಬ, ಹರಿದಿನಗಳು, ಉತ್ಸವ ಆರಾಧನೆಗಳು, ಧಾರ್ಮಿಕ ಮುಖಂಡರ ಜಯಂತಿಗಳು ಜನರನ್ನು ಒಟ್ಟಿಗೆ ತರುವ ಕೆಲಸಕ್ಕೆ ಬದಲಾಗಿ ಸಮಾಜವನ್ನು ಒಡೆಯುವ ಆಯುಧಗಳಾಗುತ್ತಿವೆ.
ಪರಿಸರ ಉಳಿದರೆ ಮಾನವ ಉಳಿಯುವುದು. ಭಾರತದ ಜೀವಜಲವಾಗಿರುವ ಪಶ್ಚಿಮ ಘಟ್ಟವು ಇಂದು ಅಪಾಯವನ್ನು ಎದುರಿಸುತ್ತಿದೆ. ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಯಬಾರದು. ಪಶ್ಚಿಮಘಟ್ಟ ಪ್ರದೇಶ ಅನೇಕ ಮುಖ್ಯ ನದಿಗಳ ಮೂಲವಾಗಿದ್ದು ಅದರ ರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.
ಕನ್ನಡಿಗರಿಗೆ ಉದ್ಯೋಗದ ಅವಕಾಶಗಳು ಹೆಚ್ಚು ದೊರೆಯುತ್ತಿಲ್ಲ. ನಿರುದ್ಯೋಗ ಯುವಜನತರಯ ಬದುಕನ್ನು ದುರ್ಭರಗೊಳಿಸುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದ ಸಾಹಿತಿಗಳು
ಸರೋಜಿನಿ ಮಹಿಷಿ ಸಮಿತಿ ವರದಿ ಇನ್ನೂ ಅನುಷ್ಠಾನಗೊಂಡಿಲ್ಲ. ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.
ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ಹಿಂದಿ ಭಾಷಿಕರು ತುಂಬಿ ಹೋಗಿದ್ದಾರೆ. ಕೇಂದ್ರ ಸರ್ಕಾರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿಂದಿಗೆ ಪ್ರಾಶಸ್ತ್ಯ ನೀಡುತ್ತಾ ಕನ್ನಡವನ್ನು ನಿರ್ಲಕ್ಷ್ಯ ಮಾಡುತ್ತಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ
ಮೀಸಲಿಡುವುದು ಸಂವಿಧಾನ ಅಥವಾ ಒಕ್ಕೂಟ ತತ್ವಕ್ಕೆ ವಿರೋಧಿ ಕ್ರಮವೇನಲ್ಲ.
ಗಡಿನಾಡು ಪ್ರದೇಶಗಳಲ್ಲಿರುವ ಕನ್ನಡಿಗರಲ್ಲಿ ಕನ್ನಡತನ, ಕನ್ನಡ ಪ್ರಜ್ಞೆಗಳನ್ನು ಮೂಡಿಸುವ ಬಗ್ಗೆ ತಾತ್ವಿಕ ನಿರ್ಧಾರ ಕೈಗೊಳ್ಳಬೇಕು.
ಗ್ರಾಮೀಣ ಪ್ರದೇಶದ ಗ್ರಂಥಾಲಯಗಳು ಕಟ್ಟಡದ ಕೊರತೆ, ವಾರ್ತಾ ಪತ್ರಿಕೆಗಳ ಮತ್ತು ವಾರ್ಷಿಕವಾಗಿ ಪುಸ್ತಕಗಳ ಸಂಗ್ರಹ ಸೇರಿದಂತೆ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದೆ. ಇದರ ಬಗ್ಗೆ ಸರ್ಕಾರ ಸೂಕ್ತ ಗಮನ ನೀಡಬೇಕು.
ಶಾಲಾ ಕಾಲೇಜು ಮಕ್ಕಳಿಗೆ ನಮ್ಮ ಇತಿಹಾಸ, ಪ್ರಕೃತಿ, ವನ್ಯಜೀವಿಧಾಮ ಮುಂತಾದವುಗಳ ಪರಿಚಯವಾಗುವಂತೆ ನಿಯತಕಾಲಿಕವಾಗಿ ಪ್ರವಾಸಗಳನ್ನು ಏರ್ಪಡಿಸುವಂತೆ ಒಂದು ಕ್ರಮಬದ್ಧ ಯೋಜನೆಯನ್ನು ರೂಪಿಸಬೇಕು.
ಕನ್ನಡ ಶಾಸ್ತ್ರೀಯ ಭಾಷಾ ಉನ್ನತ ಅಧ್ಯಯನ ಕೇಂದ್ರವನ್ನು ಬೆಳೆಸುವಲ್ಲಿ ಸರ್ಕಾರ ಮತ್ತು ಕನ್ನಡ ವಿದ್ವಾಂಸರು ಗಮನ ಕೊಡಬೇಕು ಎಂದು ಸಲಹೆ ನೀಡಿದರು…