ಚಲಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಬೆಂಕಿ…ನಂದಿಸಿದ ಅಗ್ನಿಶಾಮಕ ಸಿಬ್ಬಂದಿ…

ಚಲಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಬೆಂಕಿ…ನಂದಿಸಿದ ಅಗ್ನಿಶಾಮಕ ಸಿಬ್ಬಂದಿ…

ಮೈಸೂರು,ಡಿ27,Tv10 ಕನ್ನಡ

ಚಲಿಸುತ್ತಿದ್ದ ಸರ್ಕಾರಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ದಾಸಪ್ಪ ವೃತ್ತದ ಸಮೀಪ ನಡೆದಿದೆ.ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸಿದ್ದಾರೆ.

ಮೈಸೂರಿನಿಂದ ವಿರಾಜಪೇಟೆಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ನೊಂದಣಿ ಸಂಖ್ಯೆ KA 09 F4386 ಬಸ್ ದಾಸಪ್ಪ ವೃತ್ತದ ಬಳಿ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಪ್ರಯಾಣಿಕರು ಬಸ್ ನಿಂದ ಇಳಿದಿದ್ದಾರೆ.ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದಾಗ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪೈಪ್ ನಿಂದ ಡೀಸಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.ದೇವರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *