ನೂತನ ವರ್ಷ ಸ್ವಾಗತಕ್ಕೆ ಯೋಗಾನರಸಿಂಹಸ್ವಾಮಿ ದೇವಾಲಯದಲ್ಲಿ ಸಕಲ ಸಿದ್ದತೆ…2 ಲಕ್ಷ ಲಡ್ಡು ವಿತರಣೆಗೆ ಸಜ್ಜು…
- TV10 Kannada Exclusive
- December 28, 2024
- No Comment
- 77
ಮೈಸೂರು,ಡಿ28,Tv10 ಕನ್ನಡ
2025 ನೂತನ ವರ್ಷ ಸ್ವಾಗತಿಸಲು ಮೈಸೂರು ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡು ವಿತರಿಸಲು ಸಿದ್ದತೆ ನಡೆದಿದೆ.ಕಳೆದ 10 ದಿನಗಳಿಂದ ಲಡ್ಡು ತಯಾರಿ ಕಾರ್ಯ ಭರದಿಂದ ಸಾಗಿದೆ.ದೇವಾಲಯದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಆಡಳಿತಾಧಿಕಾರಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಸುಮಾರು 100 ಕ್ಕೂ ಹೆಚ್ಚು ಬಾಣಸಿಗರಿಂದ ಲಡ್ಡು ಸಿದ್ದವಾಗುತ್ತಿದೆ.2 ಕೆಜಿ ತೂಕದ 10 ಸಾವಿರ ಲಡ್ಡು,150 ಗ್ರಾಂ ತೂಕದ 2 ಲಕ್ಷ ಲಡ್ಡು ತಯಾರಿ ಭರದಿಂದ ಸಾಗುತ್ತಿದೆ.ಲಡ್ಡು ತಯಾರಿಕೆಗಾಗಿ 100 ಕ್ವಿಂಟಾಲ್ ಕಡ್ಲೆಹಿಟ್ಟು,200 ಕ್ವಿಂಟಾಲ್ ಸಕ್ಕರೆ,10 ಸಾವಿರ ಲೀ.ಖಾದ್ಯ ತೈಲ,500 ಕೆಜಿ ಗೋಡಂಬಿ,500 ಕೆಜಿ ಒಣದ್ರಾಕ್ಷಿ,250 ಕೆಜಿ ಬಾದಾಮಿ,1000 ಕೆಜಿ ಡೈಮಂಡ್ ಸಕ್ಕರೆ,2000 ಕೆಜಿ ಬೂರಾ ಸಕ್ಕರೆ,50 ಕೆಜಿ ಪಿಸ್ತಾ,ಏಲಕ್ಕಿ,ಜಾಕಾಯಿ,ಪಚ್ಚಕರ್ಪೂರ,200 ಕೆಜಿ ಲವಂಗ ಬಳಸಲಾಗಿದೆ.ಜನವರಿ 1 2025 ರ ಬೆಳಿಗ್ಗೆ 4 ಗಂಟೆಗೆ ವಿಶೇಷ ಪೂಜೆ ನಂತರ ಭಕ್ತರಿಗೆ ಲಡ್ಡು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ ಎಂದು ದೇವಾಲಯದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ತಿಳಿಸಿದ್ದಾರೆ…