ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು…ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ…ಆತ್ಮಹತ್ಯೆಯೋ…ಆಕಸ್ಮಿಕವೋ…?

ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು…ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ…ಆತ್ಮಹತ್ಯೆಯೋ…ಆಕಸ್ಮಿಕವೋ…?

ಚಾಮರಾಜನಗರ,ಜ2,Tv10 ಕನ್ನಡ

ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ವಿಧ್ಯಾರ್ಥಿನಿಯರ ವಸತಿ ನಿಲಯದ ಕಟ್ಟಡದಿಂದ ವಿಧ್ಯಾರ್ಥಿಯೋರ್ವ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಮಣಿತ್(17) ಮೃತ ವಿಧ್ಯಾರ್ಥಿ.ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದ ಮಣಿತ್ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ಮಧ್ಯೆ ರಾತ್ರಿ 2 ಗಂಟೆಯಲ್ಲಿ ಬಿದ್ದ ಮಣಿತ್ ನನ್ನು ಬೆಳಿಗ್ಗೆ 8 ಗಂಟೆಯಲ್ಲಿ ಸಹ ವಿಧ್ಯಾರ್ಥಿಗಳು ಗಮನಿಸಿ ವಸತಿ ಶಾಲೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ.ಕೂಡಲೇ ಗಾಯಗೊಂಡು ನರಳುತ್ತಿದ್ದ ಮಣಿತ್ ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಒಂದೇ ಆವರಣದಲ್ಲಿ ವಿಧ್ಯಾರ್ಥಿನಿಯರ ಹಾಗೂ ವಿಧ್ಯಾರ್ಥಿಗಳ ಪದವಿ ಪೂರ್ವ ಕಾಲೇಜಿನ ಪ್ರತ್ಯೇಕ ವಸತಿ ನಿಲಯಗಳಿವೆ.ವಿಧ್ಯಾರ್ಥಿನಿಯರ ವಸತಿ ನಿಲಯಕ್ಕೆ ಮಣಿತ್ ಹೋದ ಉದ್ದೇಶವೇನು ಗೊತ್ತಿಲ್ಲ,ವಿಧ್ಯಾರ್ಥಿನಿಯೋರ್ವಳ ಕೊಠಡಿಯ ಕಿಟಕಿ ಬಳಿಯಿಂದ ಮಣಿತ್ ಬಿದ್ದಿದ್ದಾನೆ.ಮಧ್ಯರಾತ್ರಿಯಲ್ಲಿ ಮಣಿತ್ ಗೆ ವಿಧ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಕೆಲಸವೇನಿತ್ತು..? ಮಧ್ಯರಾತ್ರಿ ವಿಧ್ಯಾರ್ಥಿನಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿದ್ದು ಹೇಗೆ..? ವಾಚ್ ಮೆನ್ ಗಳು ಗಮನಿಸಲಿಲ್ಲವೇ…?ಪ್ರಿನ್ಸಿಪಾಲ್ ಮುನ್ನೆಚ್ಚರಿಕೆ ತೆಗೆದುಕೊಂಡಿರಲಿಲ್ಲವೇ…? ಯಾರು ಬೇಕಾದ್ರೂ ವಿಧ್ಯಾರ್ಥಿನಿಯರ ಹಾಸ್ಟೆಲ್ ಗೆ ಮಧ್ಯರಾತ್ರಿ ಪ್ರವೇಶಿಸಬಹುದೇ..?ಹಾಗಿದ್ದಲ್ಲಿ ಇಲ್ಲಿ ತಂಗಿರುವ ವಿಧ್ಯಾರ್ಥಿಗಳ ರಕ್ಷಣೆ ಹೇಗೆ..? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ.ಮಧ್ಯರಾತ್ರಿ ಬಿದ್ದು ನರಳಾಡುತ್ತಿದ್ದರೂ ಯಾರ ಗಮನಕ್ಕೂ ಬಂದಿಲ್ಲವೆಂದರೆ ಅಲ್ಲಿನ ವ್ಯವಸ್ಥೆ ಹೇಗಿದೆ ಎಂಬ ಅನುಮಾನಗಳು ಕಾಡುತ್ತಿವೆ.ಎರಡನೇ ಮಹಡಿ ಏರಿ ವಿಧ್ಯಾರ್ಥಿನಿ ಕೊಠಡಿ ಬಳಿ ತಲುಪಿದ ಕಾರಣಾವಾದ್ರೂ ಏನು…?ವಿಧ್ಯಾರ್ಥಿನಿಯರನ್ನ ಮಧ್ಯರಾತ್ರಿ ನೋಡುವ ಕೆಟ್ಟ ಚಟವೇ…? ಅಥವಾ ಪ್ರೇಮ ಪ್ರಸಂಗವೇ…? ತನ್ನಿಷ್ಟದಂತೆ ನಡೆಯಲಿಲ್ಲವೆಂದು ಬಿದ್ದು ಆತ್ಮಹತ್ಯೆ ಮಾಡಿಕೊಂಡನೇ..? ಅಥವಾ ಆಕಸ್ಮಿಕವಾಗಿ ಜಾರಿ ಬಿದ್ದನೇ…? ಇವೆಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಬೇಕಿದೆ.

ಸಂಭಂಧ ಪಟ್ಟ ಇಲಾಖೆ ಅಧಿಕಾರಿಗಳು ಘಟನೆ ಬಗ್ಗೆ ಕೂಲಂಕುಷ ತೆನಿಖೆ ನಡೆಸಬೇಕಿದೆ.ಬಡ ವಿಧ್ಯಾರ್ಥಿಗಳು ಒಳ್ಳೆಯ ಭವಿಷ್ಯದ ದೃಷ್ಟಿಯಿಂದ ಇಲ್ಲಿ ಪ್ರವೇಶ ಪಡೆಯುತ್ತಾರೆ.ಅವರ ರಕ್ಷಣೆ ಹೇಗೆ ಎಂಬ ಪ್ರಶ್ನೆಯೂ ಉದ್ಭವವಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *