ಕೋಟ್ಯಾಂತರ ಬೆಲೆ ಬಾಳುವ ಜಮೀನು ಜಿಲ್ಲಾಡಳಿತ ವಶಕ್ಕೆ…ತಹಸೀಲ್ದಾರ್ KM ಮಹೇಶ್ ಕುಮಾರ್ ನೇತೃತ್ವದಲ್ಲಿ ಕ್ರಮ…

ಕೋಟ್ಯಾಂತರ ಬೆಲೆ ಬಾಳುವ ಜಮೀನು ಜಿಲ್ಲಾಡಳಿತ ವಶಕ್ಕೆ…ತಹಸೀಲ್ದಾರ್ KM ಮಹೇಶ್ ಕುಮಾರ್ ನೇತೃತ್ವದಲ್ಲಿ ಕ್ರಮ…

ಮೈಸೂರು,ಜ3,Tv10 ಕನ್ನಡ

ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಕಟ್ಟಡ ಕಾಮಗಾರಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು ಇಂದು ಫಲಕ ಅಳವಡಿಸುವ ಮೂಲಕ ತನ್ನ ವಶಕ್ಕೆ ಪಡೆದಿದೆ.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ರವರ ಆದೇಶದಂತೆ ತಹಸೀಲ್ದಾರ್ KM ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಬೆಲೆ ಬಾಳುವ ಆಸ್ತಿಯನ್ನ ವಶಕ್ಕೆ ಪಡೆದಿದ್ದಾರೆ

ಮೈಸೂರು ತಾಲೂಕು ಕಸಬಾ ಹೋಬಳಿ ಹೆಬ್ಬಾಳು ಗ್ರಾಮದ ಸರ್ವೆ ನಂ.221 ರ 1.25 ಎಕ್ರೆ ಜಮೀನು ಸರ್ಕಾರಕ್ಕೆ ಸೇರಿದ ಆಸ್ತಿ.ಸದರಿ ಆಸ್ತಿಯಲ್ಲಿ ಭೂಗಳ್ಳರು ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿದ್ದ ಮಾಹಿತಿ ಅರಿತ ತಹಸೀಲ್ದಾರ್ KM ಮಹೇಶ್ ಕುಮಾರ್ ದಾಖಲೆಗಳನ್ನ ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.ವಿಜಯನಗರ ಠಾಣೆಗೆ ಪತ್ರ ಬರೆದು ನಿರ್ಮಾಣ ಕಾರ್ಯ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದರು.ಇದರಂತೆ ನಿರ್ಮಾಣ ಕಾರ್ಯಕ್ಕೆ ಬ್ರೇಕ್ ಹಾಕಲಾಗಿತ್ತು.ಇಂದು ಸದರಿ ಜಾಗದಲ್ಲಿ ಫಲಕ ಅಳವಡಿಸುವ ಮೂಲಕ ತಮ್ಮ ವಶಕ್ಕೆ ಪಡೆದಿದ್ದಾರೆ.

ವಿಶೇಷ ಜಿಲ್ಲಾಧಿಕಾರಿಗಳ ಆದೇಶ ಸಂಖ್ಯೆ ULA 1135/76-77 ದಿನಾಂಕ 5-7-85 ರಂತೆ ಸದರಿ ಜಮೀನನ್ನ ಹೆಚ್ಚುವರಿ ನಗರಾಸ್ತಿ ಎಂದು ಘೋಷಿಸಿ RTC ಯಲ್ಲಿ ‘ಸರ್ಕಾರ’ ಎಂದು ಘೋಷಿಸಿ ನಮೂದಾಗಿದೆ.ದಾಖಲೆಗಳ ಪ್ರಕಾರ ಸರ್ಕಾರಕ್ಕೆ ಸೇರಿದ ಆಸ್ತಿಯಲ್ಲಿ ಭೂಗಳ್ಳರು ಅಕ್ರಮವಾಗಿ ಕಟ್ಟಡ ನಿರ್ಮಿಸಿ ಮಾರಾಟ ಮಾಡಲು ಯತ್ನಿಸಿದ್ದಾರೆಂದು ಆರೋಪಿಸಿ ತಹಸೀಲ್ದಾರ್ KM ಮಹೇಶ್ ಕುಮಾರ್ ರವರು ಪೊಲೀಸರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು.ನಿನ್ನೆ ಕಟ್ಟಡ ಕಾಮಗಾರಿಯನ್ನ ಸ್ಥಗಿತಗೊಳಿಸಿದ KM ಮಹೇಶ್ ಕುಮಾರ್ ಇಂದು ಸದರಿ ಜಾಗದಲ್ಲಿ ಫಲಕ ಅಳವಡಿಸಿ ಜಿಲ್ಲಾಡಳಿತದ ವಶಕ್ಕೆ ಪಡೆದಿದ್ದಾರೆ.ಶೀಘ್ರದಲ್ಲೇ ಅಕ್ರಮ ಕಟ್ಟಡವನ್ನೂ ಸಹ ತೆರುವುಗೊಳಿಸುವುದಾಗಿ ತಹಸೀಲ್ದಾರ್ ತಿಳಿಸಿದ್ದಾರೆ.

ಇಂದಿನ ಕಾರ್ಯಾಚರಣೆಯಲ್ಲಿ ಆರ್.ಐ.ಹೇಮಂತ್ ಕುಮಾರ್,ಗ್ರಾಮ ಆಡಳಿತಾಧಿಕಾರಿಗಳಾದ ಮಹೇಶ್ .ಡಿ ಹಾಗೂ ಅಜೀಮ್ ಖಾನ್ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ….

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *