ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು ಪ್ರಕರಣ…ಮುರಾರ್ಜಿ ವಸತಿ ಕಾಲೇಜು ಪ್ರಾಂಶುಪಾಲೆ ಮತ್ತು ವಾರ್ಡನ್ ಸಸ್ಪೆಂಡ್…

ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು ಪ್ರಕರಣ…ಮುರಾರ್ಜಿ ವಸತಿ ಕಾಲೇಜು ಪ್ರಾಂಶುಪಾಲೆ ಮತ್ತು ವಾರ್ಡನ್ ಸಸ್ಪೆಂಡ್…

ಚಾಮರಾಜನಗರ,ಜ5,Tv10 ಕನ್ನಡ

ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಹಾಗೂ ವಾರ್ಡನ್ ನ ಸಸ್ಪೆಂಡ್ ಮಾಡಲಾಗಿದೆ.ಗುಂಡ್ಲುಪೇಟೆ ತಾಲೂಕು ಬೇಗೂರು ಸಮೀಪವಿರುವ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ಶಾಲೆಯಲ್ಲಿ ಘಟನೆ ನಡೆದಿತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಮಣಿತ್(17)ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಂಭೀರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದ. ಮಣಿತ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ.ಮಧ್ಯೆ ರಾತ್ರಿ 2 ಗಂಟೆಯಲ್ಲಿ ಬಿದ್ದ ಮಣಿತ್ ನನ್ನು ಮರುದಿನ ಬೆಳಿಗ್ಗೆ 8 ಗಂಟೆಯಲ್ಲಿ ಸಹ ವಿಧ್ಯಾರ್ಥಿಗಳು ಗಮನಿಸಿ ವಸತಿ ಶಾಲೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ.ಕೂಡಲೇ ಗಾಯಗೊಂಡು ನರಳುತ್ತಿದ್ದ ಮಣಿತ್ ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆಯ ವಿಚಾರವಾಗಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪ ನಾಗ್ ಮತ್ತು ಅಪಾರ ಜಿಲ್ಲಾಧಿಕಾರಿ ಗೀತಾ ಹುಡೇದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಮುನಿರಾಜು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಬಳಿಕ ಮೇಲ್ನೋಟಕ್ಕೆ ಕಾಲೇಜು ಪ್ರಾಂಶುಪಾಲೆ ರಾಜೇಶ್ವರಿ ಮತ್ತು ಮೇಲ್ವಿಚಾರಕ ಚಿಂತನ್ ಎಂಬುವರನ್ನು ಅಮಾನತು ಮಾಡಿದ್ದಾರೆ.
ಪ್ರತ್ಯೇಕವಾಗಿ ಹೆಚ್ಚಿನ ತನಿಖೆಗೆ ಎಂದು ಮೂರು ಜನ ಅಧಿಕಾರಿಗಳ ಸಮಿತಿ ತಂಡದಿಂದ ಭೇಟಿ ನೀಡಿ ಕುಲಂಕುಶವಾಗಿ ಪರಿಶೀಲನೆ ಮಾಡಿದ ಬಳಿಕ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ. ಎರಡು ಗಂಟೆ ಸಮಯದಲ್ಲಿ ಬಿಲ್ಡಿಂಗ್ ಮೇಲೆ ಏರಲು ಕಾರಣವೇನು ? ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಅಳವಡಿಸಿರುವ ಸಿಸಿಟಿವಿ ವೈರ್ ಗಳು ಕಟ್ಟಾಗಿ ಸ್ಥಗಿತವಾಗಿರುವುದು ಸಾಕಷ್ಟು ಅನುಮಾನಗಳಿಗೆ ಮಾಡಿಕೊಟ್ಟಿದೆ.ಬಾಲಕ ಮತ್ತು ಬಾಲಕಿಯರ ಕಾಲೇಜು ವಸತಿ ಶಾಲೆಯಲ್ಲಿ ಜಾಗೃತಿಯಿಂದ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಲು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮತ್ತು ಶಿಕ್ಷಕರು ಉಪನ್ಯಾಸಕರು ಸೇರಿದಂತೆ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಇನ್ನಷ್ಟು ಹೆಚ್ಚಿನ ತನಿಖೆ ಮಾಡಿ ಸಂಬಂಧಪಟ್ಟವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗುತ್ತೇವೆ ಹಾಗೂ ಮೃತಪಟ್ಟಿರುವ ವಿದ್ಯಾರ್ಥಿಯ ಸಂಪೂರ್ಣ ವಿಚಾರವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಅಲ್ಲಿಯ ಮೇಲಾಧಿಕಾರಿಗಳ ಆದೇಶದ ಮೇರೆಗೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ತಿಳಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *