ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಮಹಿಳೆ ಸೇರಿ ಇಬ್ಬರು ಕಳ್ಳರ ಸೆರೆ…12 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶ…

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಮಹಿಳೆ ಸೇರಿ ಇಬ್ಬರು ಕಳ್ಳರ ಸೆರೆ…12 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶ…

ಮೈಸೂರು,ಜ6,Tv10 ಕನ್ನಡ

ಲಷ್ಕರ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಕಳ್ಳರನ್ನ ಬಂಧಿಸಲಾಗಿದೆ.ಬಂಧಿತರಿಂದ 12 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ಭದ್ರಾವತಿ ಮೂಲದ ಸಾವಿತ್ರಿ(42) ಹಾಗೂ ಗುರುರಾಜ್(45) ಬಂಧಿತರು.

ಡಿಸೆಂಬರ್ 16 ರಂದು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗ್ ಕಳುವು ಮಾಡಿ 184 ಗ್ರಾಂ ಚಿನ್ನಾಭರಣ ಲಪಟಾಯಿಸಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಖದೀಮರ ಬಂಧನಕ್ಕೆ ತಂಡ ರಚಿಸಲಾಗಿತ್ತು.ಆರೋಪಿಗಳನ್ನ ಬಂಧಿಸುವಲ್ಲಿ ತಂಡ ಯಶಸ್ವಿಯಾಗಿದೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಪ್ರಸಾದ್ ಕೆ.ಆರ್. ಹಾಗೂ ಪಿಎಸ್ಸೈಗಳಾದ ರಾಧ ಮತ್ತು ಅನಿಲ್ ಕುಮಾರ್ ವನ್ನೂರು ನೇತೃತ್ವದಲ್ಲಿ ಸಿಬ್ಬಂದಿಗಳಾದ ಸುರೇಶ್,ರವಿಕುಮಾರ್,ಗಿರೀಶ್,ಮಂಜುನಾಥ್,ಚೌಡಪ್ಪ ಪಾಸೀಗರ್,ಅಬ್ದುಲ್ ರೆಹಮಾನ್,ಅಶ್ವಿನಿಬಹಳವಾರ್,ಕುಮಾರ್ ರವರನ್ನೊಳಗೊಂಡ ತಂಡ ಆರೋಪಿಗಳ ಪತ್ತೆ ಕಾರ್ಯ ಯಶಸ್ವಿಗೊಳಿಸಿದೆ.

ನಗರಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ರವರು ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *