ಠಾಣೆ ಕ್ಯಾಂಟೀನ್ ನಲ್ಲಿ ಬರ್ತ್ ಡೇ ಪಾರ್ಟಿ…ದುರುಪಯೋಗವಾಗುತ್ತಿದ್ರೂ ಕೇಳುವವರಿಲ್ಲ…!!

ಠಾಣೆ ಕ್ಯಾಂಟೀನ್ ನಲ್ಲಿ ಬರ್ತ್ ಡೇ ಪಾರ್ಟಿ…ದುರುಪಯೋಗವಾಗುತ್ತಿದ್ರೂ ಕೇಳುವವರಿಲ್ಲ…!!

ನಂಜನಗೂಡು,ಜ8,Tv10 ಕನ್ನಡ

ಠಾಣೆ ಆವರಣದಲ್ಲಿರುವ ಕ್ಯಾಂಟೀನ್ ನಲ್ಲಿ ಖಾಸಗಿ ವ್ಯಕ್ತಿಗಳು ಬರ್ತ್ ಡೇ ಪಾರ್ಟಿ ಆಚರಿಸುವ ಮೂಲಕ ಸರ್ಕಾರದ ಜಾಗವನ್ನ ದುರುಪಯೋಗ ಪಡಿಸಿಕೊಳ್ಳುತ್ತಿರುವ ಸಂಗತಿಯೊಂದು ಬೆಳಕಿಗೆ ಬಂದಿದೆ.ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಸೇರಿದ ಕ್ಯಾಂಟೀನ್ ದುರುಪಯೋಗವಾಗುತ್ತಿರುವ ಆರೋಪ ಕೇಳಿ ಬಂದಿದೆ.ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಠಾಣೆಗೆ ಬರುವ ಸಾರ್ವಜನಿಕರಿಗೆ ಉಪಯೋಗವಾಗಲೆಂದು ಈ ಕ್ಯಾಂಟೀನ್ ತೆರೆಯಲಾಗಿದೆ.ಖಾಸಗಿ ವ್ಯಕ್ತಿಯೊಬ್ಬ ಗುತ್ತಿಗೆ ಪಡೆದು ಕ್ಯಾಂಟೀನ್ ನಡೆಸುತ್ತಿದ್ದಾನೆ.ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಕಾರ್ಯಕ್ರಮಗಳನ್ನ ನಡೆಸಬಾರದೆಂದ ನಿಯಮಗಳಿವೆ.ಆದ್ರೆ ಈ ಕ್ಯಾಂಟೀನ್ ನಲ್ಲಿ ನಿಯಮಗಳನ್ನ ಗಾಳಿಗೆ ತೂರಿ ಬರ್ತ್ ಡೇ ಪಾರ್ಟಿ ಆಚರಿಸಲಾಗಿದೆ.ಕೇಕ್ ಕತ್ತರಿಸಿ ಸಂಭ್ರಮಿಸಲಾಗಿದೆ.

ಈ ಹಿಂದೆ ಈ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಯೊಬ್ಬರು ಕ್ಯಾಂಟೀನ್ ನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಅಪಸ್ವರವೆತ್ತಿ ಸ್ಥಗಿತಗೊಳಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗೆ ಪತ್ರ ಬರೆದಿದ್ದರೆಂದು ಹೇಳಲಾಗಿದೆ.ಹೀಗಿದ್ದರೂ ಸಂಭಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ.ಇಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಮೇಲೆ ನಿಗಾ ಇಡುತ್ತಿಲ್ಲದಿರುವುದು ಇದೀಗ ಖಚಿತವಾಗಿದೆ.ಠಾಣೆ ಆವರಣದಲ್ಲಿರುವ ಕ್ಯಾಂಟೀನ್ ಹೀಗೆ ದುರುಪಯೋಗವಾದ್ರೆ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.ಈ ಕಾರ್ಯಕ್ರಮ ನಡೆದಿರುವುದು ಠಾಣಾಧಿಕಾರಿ ಗಮನಕ್ಕೆ ಬಂದಿಲ್ಲವೇ…? ಬಂದಿದ್ದರೂ ನಡೆಸಲು ಅನುಮತಿ ನೀಡಿದ್ದು ಏಕೆ…?ಠಾಣಾಧಿಕಾರಿ ಅನುಮತಿ ಇಲ್ಲದೆ ಇಂತಹ ಕಾರ್ಯಕ್ರಮಗಳು ನಡೆಯಲು ಸಾಧ್ಯವೇ…? ಇದುವರೆಗೆ ಏಕೆ ಕ್ರಮ ಕೈಗೊಂಡಿಲ್ಲ…? ಎಂಬ ಪ್ರಶ್ನೆಗಳಿಗೆ ಠಾಣಾಧಿಕಾರಿ ಉತ್ತರ ನೀಡಬೇಕಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *