
ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ…?ನಂಜನಗೂಡು ಗ್ರಾಮಾಂತರ ಪೊಲೀಸರಿಂದ ತೆನಿಖೆ…
- TV10 Kannada Exclusive
- January 27, 2025
- No Comment
- 45
ನಂಜನಗೂಡು,ಜ27,Tv10 ಕನ್ನಡ
ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆಗೆ ಶರಣಾದ ಆರೋಪ ಕೇಳಿಬಂದಿದೆ.
ಜಯಶೀಲ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಘಟನೆ ನಡೆದಿದೆ.
ಐ ಐ ಎಫ್ ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ 5 ಲಕ್ಷ ಸಾಲ ಪಡೆದಿದ್ದರು.
ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಸಾಲ ಪಡೆದಿದ್ದರು.
ಪ್ರತಿ ತಿಂಗಳು 20 ಸಾವಿರಕ್ಕೂ ಹೆಚ್ಚು ಇ ಎಂ ಐ ಕಟ್ಟಬೇಕಾಗಿತ್ತು.
ಸಾಲ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು.
ಈ ಹಿನ್ನೆಲೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು.
ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತನಿಖೆ ನಂತರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ…