ವಿಚಿತ್ರ ರೂಪ ಹೊಂದಿದ ಮಗು ಜನನ…ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ…ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ…

ವಿಚಿತ್ರ ರೂಪ ಹೊಂದಿದ ಮಗು ಜನನ…ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ…ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ…

ನಂಜನಗೂಡು,ಫೆ5,Tv10 ಕನ್ನಡ

ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ.ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ.ವಿಚಿತ್ರವಾದ ಕಣ್ಣು ಮತ್ತು ತುಟಿ ಮೈಯೆಲ್ಲಾ ಇದ್ದಲಿನಂತೆ ಕಪ್ಪು ಬಣ್ಣ.ನೋಡುಗರನ್ನ ಬೆಚ್ಚಿಬೀಳುವಂತಹ ಮಗು ಹುಟ್ಟುವ ಮೂಲಕ ಆರೋಗ್ಯ ಇಲಾಖೆಯನ್ನ ಹುಬ್ಬೇರುವಂತೆ ಮಾಡಿದೆ.ಹುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿರುವ ಗ್ರಾಮ ಒಂದರ ದಂಪತಿಗೆ ಇಂತಹ ರೂಪ ಹೊಂದಿರುವ ಮಗು ಹುಟ್ಟಿದೆ.ಮಗುವಿನ ಆಕಾರ ಮತ್ತು ರೂಪಕ್ಕೆ ಗ್ರಾಮಸ್ಥರು ಮತ್ತು ದಂಪತಿ ಕುಟುಂಬಸ್ಥರು ಶಾಕ್ ಆಗಿದ್ದಾರೆ.ಕೆಲವೇ ಗಂಟೆಗಳ ಹಿಂದೆ ಹುಟ್ಟಿದ ಮಗುವನ್ನು ಉಳಿಸಿಕೊಳ್ಳಲು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ವಿಚಿತ್ರ ರೂಪದ ಮಗುವನ್ನ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏಳು ದಿನಗಳ ಕಾಲ ತುರ್ತು ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಿದ್ದಾರೆ.
ಕಳೆದ ವರ್ಷಗಳ ಇದೇ ದಂಪತಿ ಇಂತದ್ದೇ ರೂಪ ಹೊಂದಿದ ಮಗುವಿಗೆ ಜನ್ಮ ನೀಡಿತ್ತು. ನಾಲ್ಕೈದು ದಿನಗಳ ಸಾವನ್ನಪ್ಪಿತ್ತು.
ಮತ್ತೆ ಈ ಬಾರಿಯೂ ಕೂಡ ಇದೇ ರೀತಿ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸುವಂತಹ ವಿಚಿತ್ರ ಮಗು ಈ ದಂಪತಿಗೆ ಹುಟ್ಟಿದೆ.ಈ ಹಿಂದೆ ನಡೆದ ಪ್ರಕರಣದ ನಂತರ ಆರೋಗ್ಯ ಇಲಾಖೆ ನೀಡಿದ್ದ ಸಲಹೆ ಸೂಚನೆಗಳನ್ನ ದಂಪತಿ ಪಾಲಿಸಿಲ್ಲ ಎಂದು ಹೇಳಲಾಗಿದೆ. ಮಗುವನ್ನ ಉಳಿಸಿಕೊಳ್ಳಲು ಚೆಲುವಾಂಬಾ ಆಸ್ಪತ್ರೆಯ ತುರ್ತು ಘಟಕದಲ್ಲಿ ಹರಸಾಹಸ ನಡೆಸಲಾಗುತ್ತಿದೆ.ವಿಸ್ಮಯವಾದ ಮಗು ಹುಟ್ಟುವ ಮೂಲಕ ವೈದ್ಯಲೋಕಕ್ಕೆ ಇದು ಸವಾಲು ಎನ್ನುವಂತಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *