ಐಸ್ ಕ್ರೀಂ ಮಾರಾಟ ನೆಪದಲ್ಲಿ ಮಹಿಳೆ ಚಿನ್ನದ ಸರ ಕಸಿದು ಸಿಕ್ಕಿಬಿದ್ದ ಕಳ್ಳ…ಆರೋಪಿ ಪೊಲೀಸರ ವಶಕ್ಕೆ…

ಐಸ್ ಕ್ರೀಂ ಮಾರಾಟ ನೆಪದಲ್ಲಿ ಮಹಿಳೆ ಚಿನ್ನದ ಸರ ಕಸಿದು ಸಿಕ್ಕಿಬಿದ್ದ ಕಳ್ಳ…ಆರೋಪಿ ಪೊಲೀಸರ ವಶಕ್ಕೆ…

ಹುಣಸೂರು,ಫೆ5,Tv10 ಕನ್ನಡ

ಜಮೀನು ಕೆಲಸ ಮಾಡಲು ತೆರಳುತ್ತಿದ್ದ ಮಹಿಳೆಯನ್ನ ಐಸ್ ಮಾರಾಟ ಮಾಡುವ ನೆಪದಲ್ಲಿ ಹಿಂಬಾಲಿಸಿ ನಂತರ ಹಲ್ಲೆ ನಡೆಸಿ ಚಿನ್ನದ ಸರ ಕಿತ್ತು ಪರಾರಿಯಾದ ಖದೀಮ ಪೊಲೀಸರ ಅತಿಥಿಯಾದ ಘಟನೆ ಹುಣಸೂರಿನಲ್ಲಿ ನಡೆದಿದೆ.ಕೆಂಪರಾಜು ಸಿಕ್ಕಿಬಿದ್ದ ಆರೋಪಿ.ಹುಣಸೂರು ತಾಲೂಕು ಹೊಸವಾರಂಚಿ ಗ್ರಾಮದಲ್ಲಿ ಘಟನೆ ನಡೆದಿದೆ.ಗ್ರಾಮದ ಜ್ಯೋತಿ ಎಂಬುವರು ಅವರೆಕಾಯಿ ಕೊಯ್ಯಲು ಜಮೀನಿಗೆ ತೆರಳುತ್ತಿದ್ದರು.ಈ ವೇಳೆ ಕೆಂಪರಾಜು ಐಸ್ ಕ್ರೀಂ ಮಾರಾಟ ಮಾಡುತ್ತಿರುವಂತೆ ಹಿಂಬಾಲಿಸಿದ್ದಾನೆ.ಜ್ಯೋತಿ ರವರು ಜಮೀನಿಗೆ ಪ್ರವೇಶಿಸಿ ಕೆಲಸ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಕೆಂಪರಾಜು ಕಲ್ಲನ್ನ ಎತ್ತಿ ತಲೆಮೇಲೆ ಹಾಕಿ ಕೊಲ್ಲುವ ಬೆದರಿಕೆ ಒಡ್ಡಿ 35 ಗ್ರಾಂ ಚಿನ್ನದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾನೆ.ಕೂಡಲೇ ಕೆಂಪರಾಜು ನಿಂದ ಬಚಾವ್ ಆಗಿ ಬಂದ ಜ್ಯೋತಿ ಸನಿಹದಲ್ಲೇ ಕೆಲಸ ಮಾಡುತ್ತಿದ್ದ ಗ್ರಾಮಸ್ಥರಿಗೆ ತಿಳಿಸಿದ್ದಾರೆ.ಕೆಂಪರಾಜು ನ ಪತ್ತೆ ಹಚ್ಚಿದ ಗ್ರಾಮಸ್ಥರು ಪೊಲೀಸರ ವಶಕ್ಕೆ ನೀಡಿದ್ದಾರೆ.ಚಿನ್ನದ ಸರ ವಶಪಡಿಸಿಕೊಂಡ ಹುಣಸೂರು ಪೊಲೀಸರು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *