
ರಿಟೈರ್ಡ್ ಪರ್ಸನ್ ಖಾತೆಗೆ ಕನ್ನ…ಕೇವಲ ಒಂದು ಗಂಟೆ ಅವಧಿಯಲ್ಲಿ 19.30 ಲಕ್ಷ ಗಾಯಬ್…ಖಾತೆದಾರ ಶಾಕ್…!
- TV10 Kannada Exclusive
- February 15, 2025
- No Comment
- 101



ಮೈಸೂರು,ಫೆ15,Tv10 ಕನ್ನಡ
ಕೇವಲ ಒಂದು ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ ಖದೀಮರು 19.30 ಲಕ್ಷ ಲಪಟಾಯಿಸಿದ ವಂಚನೆ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಶ್ರೀರಾಂಪುರ ನಿವಾಸಿ ಫಾರ್ಮಾಸ್ಯೂಟಿಕಲ್ಸ್ ಒಂದರಲ್ಲಿ ಕೆಲಸ ಮಾಡಿ ನಿವೃತ್ತಿಹೊಂದಿದ್ದ ಮುರುಗೇಶ್ ಎಂಬುವರ ಖಾತೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಐಸಿಐಸಿಐ ಬ್ಯಾಂಕ್ ನಲ್ಲಿ ಹೊಂದಿದ್ದ ಒಂದು ಖಾತೆಯಿಂದ 17 ಲಕ್ಷ ಮತ್ತೊಂದು ಖಾತೆಯಿಂದ 2.30 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ.ಇಂಟರ್ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಹೊಂದಿದ್ದ ಮುರುಗೇಶ್ ರವರ ಖಾತೆ ವಿವರವನ್ನ ಹ್ಯಾಕ್ ಮಾಡಿರಬಹುದೆಂದು ಶಂಕಿಸಲಾಗಿದೆ.ಕೇವಲ ಒಂದೇ ಗಂಟೆ ಅವಧಿಯಲ್ಲಿ ಖಾತೆಯಲ್ಲಿದ್ದ ಹಣ ಮಂಗಮಾಯವಾಗಿದೆ.ಹಣ ಕಳೆದುಕೊಂಡ ಮುರುಗೇಶ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…