
ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ…ಸಬ್ ಇನ್ಸ್ಪೆಕ್ಟರ್ ವರ್ಗಾವಣೆ…
- TV10 Kannada Exclusive
- February 18, 2025
- No Comment
- 95
ಮೈಸೂರು,ಫೆ18,Tv10 ಕನ್ನಡ
ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಭಂಧಿಸಿದಂತೆ ಸಬ್ ಇನ್ಸ್ ಪೆಕ್ಟರ್ ಎತ್ತಂಗಡಿಯಾಗಿದೆ.ಸಬ್
ಇನ್ಸ್ಪೆಕ್ಟರ್ ರೂಪೇಶ್ ವರ್ಗಾವಣೆ ಮಾಡಲಾಗಿದೆ.
ನಗರ ಪೊಲೀಸ್ ಆಯುಕ್ತರ ಕಚೇರಿಯ ಆಟೋಮೇಷನ್ ಸೆಂಟರ್ ಸಬ್ ಇನ್ಸ್ ಪೆಕ್ಟರ್ ರೂಪೇಶ್ ಎತ್ತಂಗಡಿಯಾಗಿದ್ದಾರೆ.
ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ.
ಗಲಾಟೆ ತಡೆಯಲು ಅವಕಾಶ ಇದ್ದರೂ ನಿರ್ಲಕ್ಷ್ಯ ಮಾಡಿದ ಆರೋಪ ಹಿನ್ನಲೆ ವರ್ಗಾವಣೆ ಮಾಡಲಾಗಿದೆ.
ಆಕ್ಷೇಪಾರ್ಹ ಪೊಸ್ಟ್ ಹಾಕಿದ್ದ ಆರೋಪಿ ಸತೀಶ್ ಆಲಿಯಾಸ್ ಪಾಂಡುರಂಗನನ್ನ ರೂಪೇಶ್ ಠಾಣೆಗೆ ಕರೆತಂದಿದ್ದರು. ಆದರೆ ಬೆಳಿಗ್ಗೆಯಿಂದ ಸಂಜೆಯವರೆಗೂ ಸತೀಶ್ ಮೇಲೆ ಯಾವುದೇ ಕ್ರಮ ಕೈಗೊಳ್ಳಲು ಇನ್ಸ್ ಪೆಕ್ಟರ್ ರೂಪೇಶ್ ಹಿಂದೇಟು ಹಾಕಿದ್ದರು ಎನ್ನಲಾಗಿದೆ.
ಇದರಿಂದ ಮುಂದೆ ಮುಸ್ಲಿಂ ಯುವಕರ ಗುಂಪು ಜಮಾಯಿಸಿ ಗಲಾಟೆ ನಡೆಸಿತ್ತು.
ಈ ಮಧ್ಯೆ ರೂಪೇಶ್ ವಿರುದ್ದ ಹಲವು ಆರೋಪಗಳು ಕೇಳಿ ಬಂದ ಹಿನ್ನಲೆ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ…