ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ನಂಜನಗೂಡು,ಫೆ19,Tv10 ಕನ್ನಡ

ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ಭೂತದ ಮುಖವಾಡ ಇರುವ ಬೊಂಬೆಗಳನ್ನ ಅಳವಡಿಸುವುದನ್ನ ನೋಡಿದ್ದೇವೆ.ಆದ್ರೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ

ಹುಡುಕಿದ್ದಾನೆ.ಅರೆಬೆತ್ತಲೆಯಾಗಿ ಇರುವ ಮಾಡೆಲ್ ಗಳ ಫೋಟೋಗಳನ್ನ ತನ್ನ ಜಮೀನಿನ ಸುತ್ತ ಅಳವಡಿಸಿ ಗ್ರಾಮಸ್ಥರ ಚರ್ಚೆಗೆ ಗ್ರಾಸವಾಗಿದ್ದಾರೆ

ನಂಜನಗೂಡಿನಿಂದ ಮಡಹಳ್ಳಿ ಹಾಗೂ ತಗಡೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕಕ್ಕರಹಟ್ಟಿ ಗ್ರಾಮದ ರೈತ ಸೋಮೇಶ್ ಇಂತಹ ಐನಾತಿ ಐಡಿಯಾ ಹುಡುಕಿ ಚರ್ಚೆಗೆ

ಗ್ರಾಸವಾಗಿದ್ದಾನೆ.ತನ್ನ ನಾಲ್ಕು ಎಕ್ರೆಯಲ್ಲಿ ಬೆಳೆದ ಬಾಳೆ ಬೆಳೆ ಸೊಗಸಾಗಿ ಮೂಡಿ ಬಂದಿದೆ.ಬೆಳೆ ಮೇಲೆ ಸಾರ್ವಜನಿಕರ ದೃಷ್ಟಿ ಬೀಳಬಾರದು ಎಂಬ ಕಾರಣಕ್ಕೆ ದೃಷ್ಟಿ ಬೊಂಬೆಗಳನ್ನ ಅಳವಡಿಸುವ ಬದಲು ಮಾಡೆಲ್ ಗಳ ಅರೆಬೆತ್ತಲೆ ಫೋಟೋಗಳನ್ನ ಅಳವಡಿಸಿದ್ದಾನೆ.ತನ್ನ ಜಮೀನಿನ ಸುತ್ತು ಸುಮಾರು 10 ಸ್ಥಳಗಳಲ್ಲಿ ಮಾಡೆಲ್ ಗಳ ಚಿತ್ರಗಳು ರಾರಾಜಿಸುತ್ತಿವೆ.ದಾರಿಹೋಕರಂತೂ ಸೊಗಸಾಗಿ ಸಮೃದ್ದಿಯಾಗಿ ಬೆಳೆದ ಬಾಳೆ ಗಿಡಗಳ ಮೇಲೆ ದೃಷ್ಟಿ ಹರಿಸದೆ ಮಾಡೆಲ್ ಗಳನ್ನ ಕಣ್ತುಂಬಿಕೊಂಡು ಸಾಗುತ್ತಿದ್ದಾರಂತೆ.ರೈತ ಸೋಮೇಶ್ ಐನಾತಿ ಐಡಿಯಾ ಕೆಲವು ಗ್ರಾಮಸ್ಥರನ್ನ ಕೆರಳಿಸಿದ್ರೆ ಪೆಡ್ಡೆ ಹುಡುಗರ ನಿದ್ದೆ ಕೆಡಿಸಿರುವುದಂತೂ ನಿಜ.ಒಟ್ಟಾರೆ ಸೋಮೇಶ್ ರವರ ಐಡಿಯಾನ ಹೊಗಳಬೇಕೋ…ತೆಗಳಬೇಕೋ…? ಗ್ರಾಮಸ್ಥರ ನಿರ್ಧಾರಕ್ಕೆ ಬಿಟ್ಟಿದ್ದು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *