
ಬೆಳಗಾವಿ ಜಿಲ್ಲೆಯ ಮರಾಠಿ ಪುಂಡರಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹ…ಸಿಎಂ ಗೆ ಮನವಿ ಪತ್ರ…
- TV10 Kannada Exclusive
- February 25, 2025
- No Comment
- 51

ಮೈಸೂರು,ಫೆ25,Tv10 ಕನ್ನಡ
ಮುಖ್ಯಮಂತ್ರಿಗಳಿಗೆ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಮನವಿ
ಬೆಳಗಾವಿ ಜಿಲ್ಲೆ
ಸುಳೇಬಾವಿ ಗ್ರಾಮದ ಹೊರವಲಯದಲ್ಲಿ ಕರ್ತವ್ಯ ನಿರತ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಮಹದೇವಪ್ಪ ಅವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಮರಾಠಿ ಪುಂಡರನ್ನು ಕರಠಿಣ ಶಿಕ್ಷೆಗೆ ಒಳಪಡಿಸಿ ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ
ಪ್ರಜ್ಞಾವಂತ ನಾಗರಿಕ ವೇದಿಕೆಯ ಪದಾಧಿಕಾರಿಗಳು ಇಂದು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿಗಳಾದ ಶಿವರಾಜು ರವರಿಗೆ ಮನವಿ ಪತ್ರ ನೀಡಲಾಯಿತು.
ನಂತರ ಮಾತನಾಡಿದ ಮಾಜಿ ನಗರಪಾಲಿಕೆ ಸದಸ್ಯ ಮಾ ವಿ ರಾಮ್ ಪ್ರಸಾದ್ ವಿಶ್ವ ಮಾತೃ ಭಾಷ
ದಿನದಂದೇ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಮೇಲೆ ಮರಾಠಿ ಪುಂಡರ ಗುಂಪು ಹಲ್ಲೆ ನಡೆಸಿದ್ದಾರೆ. ಈ ವಿಚಾರವಾಗಿ ಪ್ರಶ್ನಿಸಿದ ಚಾಲಕ ಕಟಾಲ್ ಸಾಬ್ ಮೇಲೆ ಪುಂಡರ ಗುಂಪು ಹಲ್ಲೆ ಮಾಡಿದ್ದಾರೆ.ಇದು ಖಂಡನೀಯ. ಹಲ್ಲೆಗೆ ಒಳಗಾದವರು
ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನಡೆ ಯುತ್ತಿದ್ದರೂ ಇಲ್ಲಿನ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಇರುವುದು ವಿಷಾದನೀಯ ಸಂಗತಿ. ಕೂಡಲೇ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಹಲ್ಲೆಕೋರರ ಮೇಲೆ ಕಠಿಣ ಕ್ರಮ ಜರುಗಿಸಬೇಕೆಂದು ಅಗ್ರಹಿಸಿದರು.
ಈ ಸಂದರ್ಭದಲ್ಲಿ ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಒಕ್ಕಲಿಗರ ಸಂಘದ ನಿರ್ದೇಶಕರಾದ ಎ.ರವಿ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್, ಸುಚಿಂದ್ರ, ಮಹಾನ್ ಶ್ರೇಯಸ್, ಅಜಯ್ ಶಾಸ್ತ್ರಿ, ಹಾಗೂ ಇನ್ನಿತರರು ಹಾಜರಿದ್ದರು..