ಅಪಾಯಕಾರಿ ಸ್ಟಂಟ್ಸ್…ಯುವಕ ಬಂಧನ…ಹೋಂಡಾ ಡಿಯೋ ಸೀಜ್…

ಅಪಾಯಕಾರಿ ಸ್ಟಂಟ್ಸ್…ಯುವಕ ಬಂಧನ…ಹೋಂಡಾ ಡಿಯೋ ಸೀಜ್…

ಮೈಸೂರು,ಫೆ28,Tv10 ಕನ್ನಡ

ಮೈಸೂರು ಹುಣಸೂರು ಮುಖ್ಯರಸ್ತೆಯಲ್ಲಿ ಸಾರ್ವಜನಿಕರಿಗೆ ಭೀತಿ ಸೃಷ್ಟಿಸುವಂತೆ ಸ್ಕೂಟರ್ ನಲ್ಲಿ ಅಪಾಯಕಾರಿ ಸ್ಟಂಟ್ಸ್ ಮಾಡಿ ಇನ್ಸ್ಟಾಗ್ರಾಂ ನಲ್ಲಿ ಅಪ್ ಲೋಡ್ ಮಾಡಿದ್ದ ಯುವಕನನ್ನ ಇಲವಾಲ ಪೊಲೀಸರು ಭಂಧಿಸಿದ್ದಾರೆ.ಮೈಸೂರಿನ ಮೇಟಗಳ್ಳಿ ಬಡಾವಣೆ ಏಕಲವ್ಯನಗರದ ನಿವಾಸಿ ಪ್ರಜ್ವಲ್ (22) ಬಂಧಿತ ಯುವಕ.ಸೋಷಿಯಲ್ ಮೀಡಿಯಾಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ವಿಚಾರಗಳನ್ನ ಅಪ್ ಲೋಡ್ ಮಾಡುವ ಖಾತೆಗಳ ಮೇಲೆ ನಿಗಾ ಇಡುವ ಜವಾಬ್ದಾರಿ ಹೊತ್ತ ಪೊಲೀಸ್ ಸಿಬ್ಬಂದಿ ಅಭಿಷೇಕ್ ರವರು ಪ್ರಜ್ವಲ್ ಅಪ್ ಲೋಡ್ ಮಾಡಿರುವ ಫೋಟೋಗಳನ್ನ ಪತ್ತೆಹಚ್ಚಿದ್ದಾರೆ.ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದ ಹಿನ್ನಲೆ ಇನ್ಸ್ಪೆಕ್ಟರ್ ಗಮನಕ್ಕೆ ತಂದಿದ್ದಾರೆ.ಕೂಡಲೇ ಎಚ್ಚೆತ್ತ ಪೊಲೀಸರು ಹೋಂಡಾ ಡಿಯೋ ವಾಹನ ನೊಂದಣಿ ಸಂಖ್ಯೆ KA-12 S 5574 ಯಲ್ಲಿ ಮುಖ್ಯರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಾ ಅಪಾಯಕಾರಿ ಸ್ಟಂಟ್ಸ್ ಮಾಡುತ್ತಿದ್ದ ಪ್ರಜ್ವಲ್ ನ ಪತ್ತೆ ಹಚ್ಚಿ ಬಂಧಿಸಿದ್ದಾರೆ.ಸ್ಟಂಟ್ಸ್ ಗೆ ಬಳಸಿದ ಹೋಂಡಾ ಡಿಯೋ ವಶಕ್ಕೆ ಪಡೆದು ಪ್ರಜ್ವಲ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *