ಹುಣಸೂರು:ವೃದ್ದ ದಂಪತಿ ಭೀಕರ ಕೊಲೆ…ಹಾಡುಹಗಲೇ ತೋಟದ ಮನೆಯಲ್ಲಿ ಘಟನೆ…

ಹುಣಸೂರು:ವೃದ್ದ ದಂಪತಿ ಭೀಕರ ಕೊಲೆ…ಹಾಡುಹಗಲೇ ತೋಟದ ಮನೆಯಲ್ಲಿ ಘಟನೆ…

ಹುಣಸೂರು,ಮಾ3Tv10 ಕನ್ನಡ

ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.
ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ ಶಾಂತಮ್ಮ (52)ಮೃತಪಟ್ಟವರು.
ಇವರಿಗೆ ಗ್ರಾಮ‌ ಪಂಚಾಯ್ತಿ ಸದಸ್ಯ ದೇವರಾಜ್ ಸೇರಿದಂತೆ ಇಬ್ಬರು ಗಂಡು ಓರ್ವ ಮಗಳಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಇಂದು ಸಂಜೆ ಶುಂಠಿ ತುಂಬಿಕೊಳ್ಳಲು ಕುಕ್ಕೆ ತರಲು ಕಾರ್ಮಿಕ ಗಣೇಶ್ ತೋಟದ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.ರಕ್ತದ ಮಡುವಿನಲ್ಲಿ ಮೃತದೇಹಗಳನ್ನ ಕಂಡ ಗಣೇಶ್ ಕೂಡಲೇ ಪುತ್ರ ದೇವರಾಜ್ ಗೆ ತಿಳಿಸಿದ್ದಾರೆ.ದೇವರಾಜ್
ಮನೆಗೆ ಬಂದ ವೇಳೆಗೆ ಇಬ್ಬರೂ ಸಾವನ್ನಪ್ಪಿದ್ದರೆಂದು ಹೇಳಲಾಗಿದೆ.ಕೂಡಲೇ ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ,ಎಸ್ಪಿ ವಿಷ್ಣುವರ್ಧನ್ ,ಡಿವೈಎಸ್ಪಿ ಗೋಪಾಲಕೃಷ್ಣ,ಸಬ್ ಇನ್ಸ್ಪೆಕ್ಟರ್ ಲೋಲಾಕ್ಷಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೈಸೂರಿನಿಂದ ಶ್ವಾನದಳ. ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *