ಪುರೋಹಿತ ಕಾರ್ಮಿಕ ಫೆಡರೇಷನ್‌ ಅಸ್ತಿತ್ವಕ್ಕೆ… ಕಚೇರಿ ಉದ್ಘಾಟನೆ…

ಪುರೋಹಿತ ಕಾರ್ಮಿಕ ಫೆಡರೇಷನ್‌ ಅಸ್ತಿತ್ವಕ್ಕೆ… ಕಚೇರಿ ಉದ್ಘಾಟನೆ…

ಮೈಸೂರು,ಮಾ5,Tv10 ಕನ್ನಡ

ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್‌ನ ಮೈಸೂರು ಜಿಲ್ಲಾ ಮತ್ತು ತಾಲೂಕು ಘಟಕದ ಕಚೇರಿ ಅಸ್ತಿತ್ವಕ್ಕೆ ಬಂದಿದೆ.ಮೈಸೂರಿನ ವಿದ್ಯಾರಣ್ಯಪುರಂನ ಅಂದಾನಿ ವೃತ್ತದ ಸಮೀಪದಲ್ಲಿ ಆರಂಭಿ ಸಿರುವ ಕಚೇರಿಯನ್ನ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಮ.ವಿ.ರಾಮ್ ಪ್ರಸಾದ್ ಉದ್ಘಾಟಿಸಿದ್ದಾರೆ.ನಂತರ ಮಾತನಾಡಿ ಪುರೋಹಿತರು ಎಂದರೆ ಹಿಂದೆ ಪುರದಹಿತ ಕಾಯು ವವರು ಎನ್ನುತ್ತಿದ್ದರು. ಈ ನಿಟ್ಟಿನಲ್ಲಿ ಒಕ್ಕೂಟ ಹೆಜ್ಜೆ ಇಡಬೇಕು. ಪುರೋ ಹಿತರು ಜನರೊಂದಿಗೆ ನಿಕಟ ಸಂಪರ್ಕ ಹೊಂದಬೇಕು ಎಂದು ತಿಳಿಸಿದರು.ಅಭ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಧಾರ್ಮಿಕ ವಿಧಿವಿಧಾನ, ಶಾಸ್ತ್ರಗಳ ಕುರಿತಂತೆ ಜ್ಞಾನ ವೃದ್ಧಿಸಿಕೊಳ್ಳಬೇಕು. ಇದರಿಂದ ನಮ್ಮ – ಸಂಸ್ಕೃತಿಯ ಬಗ್ಗೆ ಜ್ಞಾನ ಮತ್ತು ಅದರ – ಆಚಾರ-ವಿಚಾರಗಳಲ್ಲಿ ಪುರೋಹಿತ – ವರ್ಗ ಪರಿಣತಿ ಸಾಧಿಸಲು ಸಾಧ್ಯವಾ ಗಲಿದೆ ಎಂದರು. ಸರ್ಕಾರ ವಿವಿಧ ಯೋಜನೆಗಳ ಪ್ರಯೋಜನವನ್ನು ಸಂಘಟನೆ ಮೂಲಕ
ಪಡೆಯಲು ಮುಂದಾಗಬೇಕು. ಪುರೋಹಿತರನ್ನು ಒಕ್ಕೂಟದ ಪದಾಧಿಕಾರಿಗಳು ಭೇಟಿ ಮಾಡಿ, ಸದಸ್ಯತ್ವ ಮಾಡಿಸಿ ಸಂಘಟನೆ ಮಾಡಬೇಕು. ಸದಸ್ಯತ್ವ ಮಾಡಿಕೊಳ್ಳುವುದರಿಂದ ದೊರೆಯುವ ಪ್ರಯೋಜನಗಳ ಬಗ್ಗೆ ಕರಪತ್ರದ ಮೂಲಕ ಮನವರಿಕೆ ಮಾಡಿಕೊಡಬೇಕು
ಎಂದು ಸಲಹೆ ನೀಡಿದರು.
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ್ ಅಯ್ಯಂಗಾರ್ ಮಾತನಾಡಿ, ಪುರೋಹಿತ ವರ್ಗದ ಶ್ರೇಯೋಭಿವೃದ್ಧಿಗಾಗ ಇಂತಹ ಸಂಘಟನೆ ನಿಜಕ್ಕೂ ಅಗತ್ಯವಿತ್ತು. ಮಂಗಳ ಕಾರ್ಯಗಳ ನೇತೃತ್ವ ವಹಿಸು ವಲ್ಲಿ ಪುರೋಹಿತರ ಪಾತ್ರ ಸಮಾಜದಲ್ಲಿ ಮಹತ್ವ ಹೊಂದಿದೆ ಎಂದು ತಿಳಿಸಿದರು.

ಇದೇ ವೇಳೆ ಜೀವ ವಿಮೆ ಪತ್ರಗಳನ್ನು ಒಕ್ಕೂಟದ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಯಿತು. ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸತೀಶ್ ಸಿಂಹ, ಜಿಲ್ಲಾ ಮತ್ತ ತಾಲೂಕು ಘಟಕದ ಅಧ್ಯಕ ಸಂತೋಷ್‌ ಕುಮಾರ್ ದೇಶಿಕ್, ಗೌರವಾ ಧ್ಯಕ್ಷ ಎನ್.ಲಕ್ಷ್ಮೀಶ,
ಉಪಾಧ್ಯಕ್ಷರಾದ ವಿದ್ವಾನ್ ಮಧುಶಂಕರ್ ಭಟ್, ಕಾರ್ಯದರ್ಶಿ ರವಿಶಂಕರ್, ಖಜಾಂಜಿ
ಮನೋಹರ್, ಪದಾಧಿಕಾರಿಗಳಾದ ಗಣೇಶ್ ಎಂ ವಿ, ಗುರುರಾಜ್, ವೆಂಕಟೇಶ್, ವಿಜಯ ವಿಠಲಾಚಾರ್ಯ, ರಾಜಣ್ಣ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *