ಪ್ರಾಣಿ ಪಕ್ಷಿಗಳ ಸಂಕುಲ ಉಳಿಸಿ…ನಟ ಪ್ರಜ್ವಲ್ ದೇವರಾಜ್ ಕರೆ…

ಪ್ರಾಣಿ ಪಕ್ಷಿಗಳ ಸಂಕುಲ ಉಳಿಸಿ…ನಟ ಪ್ರಜ್ವಲ್ ದೇವರಾಜ್ ಕರೆ…

ಮೈಸೂರು,ಮಾ6,Tv10 ಕನ್ನಡ

ಮೂಕ ಸ್ಪಂದನ ಅಭಿಯಾನದ ಪೋಸ್ಟರ್ ಬಿಡುಗಡೆ

ಪ್ರಾಣಿ ಪಕ್ಷಿ ಸಂಕುಲ ಉಳಿಸಲು ಕರೆ ನಟ ಪ್ರಜ್ವಲ್ ದೇವರಾಜ್

ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕೆಂದು ಚಲನಚಿತ್ರ ನಟ ಪ್ರಜ್ವಲ್ ದೇವರಾಜ್ ಜನಸಾಮನ್ಯರಿಗೆ ಕರೆ ಕೊಟ್ಟಿದ್ದಾರೆ.ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ
2 ತಿಂಗಳ ಕಾಲ ಮೂಕ ಸ್ಪಂದನೆ ಎಂಬ ‘ನೀರುಣಿಸಿ-ಜೀವವನ್ನುಳಿಸಿ ಎಂಬ ಅಭಿಯಾನ ಆರಂಭಿಸಿದ್ದು ಮೈಸೂರು ನಗರದ ಚಾಮುಂಡಿಪುರಂನ ಟ್ರಸ್ಟ್ ಕಚೇರಿಯಲ್ಲಿ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಬೇಸಿಗೆಯ ರಣಬಿಸಿಲಿನ ತಾಪಮಾನದ ತೀವ್ರತೆಯಿಂದಾಗಿ ಪ್ರಾಣಿ ಪಕ್ಷಿಸಂಕುಲ ಬಳಲುತ್ತವೆ. ಕುಡಿಯುವ ನೀರು ಆಹಾರಕ್ಕಾಗಿ ಪರಿತಪಿಸುತ್ತವೆ. ಆದ್ದರಿಂದ ಪರಿಸರ ರಕ್ಷತಿ ರಕ್ಷಿತಃ ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್
2ತಿಂಗಳ ಕಾಲ ಮೂಕ ಸ್ಪಂದನೆ ಎಂಬ ‘ನೀರುಣಿಸಿ-ಜೀವವನ್ನುಳಿಸಿ, ಅಭಿಯೋಜನೆಯನ್ನು
ಮೈಸೂರು ನಗರದ ಸುತ್ತಮುತ್ತ ಪ್ರದೇಶಗಳಲ್ಲಿ ರೂಪಿಸುತ್ತಿರುವುದು ಅತ್ಯುತ್ತಮವಾದ ಕೆಲಸ. ಬೇಸಿಗೆಯ ದಿನ ಇನ್ನೇನು ಆರಂಭಗೊಂಡಿದ್ದು ಪ್ರಾಣಿ ಪಕ್ಷಿಗಳು ತಮ್ಮ ಅಸ್ಥಿತ್ವಕ್ಕಾಗಿ ಹೋರಾಟ
ನಡೆಸುವ ಹಾದಿಯಲ್ಲಿರುತ್ತವೆ. ಜನವಸತಿ ಮತ್ತು ಜನಸಂಖ್ಯೆಗನುಗುಣವಾಗಿ ಮೊಬೈಲ್ ಮತ್ತು ಇತರೆ ತರಂಗದಿಂದಾಗಿ ಹಾಗೂ ಅಗತ್ಯ ನಾಗರೀಕ ಸವಲತ್ತುಗಳ ನೆರಳಿನಡಿಯಲ್ಲಿ ಈಗಾಗಲೇ ಸಂತತಿ ಕ್ಷೀಣಿಸುತ್ತಿರುವ ಹಲವಾರು ಪಕ್ಷಿಗಳು ನಶಿಸಿ ಹೋಗುತ್ತಿವೆ. ಅಳಿದು ಉಳಿದಿವೆಯೇನೋ ಎಂಬಂತಿರುವ ಜನತೆಯ ಮಧ್ಯೆಯೇ ಬದುಕಿ ಬೆರೆತು ಜೀವಿಸುವ ಪ್ರಾಣಿಪಕ್ಷಿ ಸಂಕುಲಕ್ಕಿಂದು ತಿನ್ನಲು ಆಹಾರ ಮತ್ತು ಕುಡಿಯಲು ನೀರಿಗಾಗಿ
ಪರಿತಪಿಸುವ ಕಾಲ ಇದಾಗಿದ್ದು ಈ ಭೂಮಂಡಲದಲ್ಲಿ ಸರ್ವಜೀವಿಗಳಿಗೂ ಸಮಬಾಳು ಸ್ವತಂತ್ರತೆಯಿರಬೇಕು ಮಾನವೀಯ ದೃಷ್ಟಿಯಿಂದ ಅವುಗಳ ಬಗ್ಗೆ ಕಾಳಜಿವಹಿಸಬೇಕೆಂದು ಅವರು ಕಳಕಳಿ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ನಮ್ಮ ಈ ಅಭಿಯಾನಕ್ಕೆ ಸಾರ್ವಜನಿಕರು ಸಹ ಮೈಸೂರು ನಗರದ ಪ್ರತಿಯೊಂದು ವಾರ್ಡ್‌ ನಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ನೀರಿನ ತೊಟ್ಟಿ ಹಾಗೂ ಮರಗಳಿಗೆ ನೀರಿನ ತಟ್ಟೆ ಹಾಗೂ ಆಹಾರದ ತಟ್ಟೆ ನಿಡಲಾಗುವುದು ಹಾಗೆಯೇ ಸುತ್ತಮುತ್ತ ಇರುವವರಿಗೆ ಪ್ರತಿನಿತ್ಯ ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡುವಂತೆ ಜಾಗೃತಿ ಮೂಡಿಸಲಾಗುವುದು.
ಎಲ್ಲರೂ ಅವರವರ ಮನೆಗಳ ಮೇಲಿನ ತಾರಸಿಯ ಮೇಲೆ, ಮರಗಳ ಕೆಳಗೆ, ಮನೆಯ ಮುಂದಿನ ರಸ್ತೆಯ ಇಕೆಲಗಳಲ್ಲಿ ಪ್ರಾಣಿ
ಪಕ್ಷಿಗಳ ಬಾಯಿಗೆ ಎಟುಕುವಂತೆ ಮಣ್ಣಿನ ಬಟ್ಟಲು ಅಥವಾ ಸಣ್ಣ ಸಿಮೆಂಟ್ ತೊಟ್ಟಿಗಳನ್ನಿಟ್ಟು ಅದರಲ್ಲಿ ಶುದ್ಧ ನೀರನ್ನು ತುಂಬಿಡಬೇಕು. ಆಹಾರ ಧಾನ್ಯ ಮಿತವಾಗಿಟ್ಟು ಅವುಗಳನ್ನು ಸಲುಹಬೇಕಿದೆ. ಎಂದರು.

ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಪ್ರದೀಪ್ ಗೌಡ,ಅಮಿತ್ ಕುಮಾರ್, ಮಹಾನ್ ಶ್ರೇಯಸ್, ಸಚಿನ್ ನಾಯಕ್, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *