ಕನ್ನಡ ಕಲಾವಿದರಿಗೆಗೌರವ ಕೊಡಿ…ಡಿಕಶಿ ವಿರುದ್ದ ರೂಪಾ ಅಯ್ಯರ್ ವಾಗ್ಧಾಳಿ…ಕನ್ನಡ ಚಿತ್ರರಂಗದ ಕ್ಷಮೆ ಕೋರಲು ಒತ್ತಾಯ..

ಕನ್ನಡ ಕಲಾವಿದರಿಗೆಗೌರವ ಕೊಡಿ…ಡಿಕಶಿ ವಿರುದ್ದ ರೂಪಾ ಅಯ್ಯರ್ ವಾಗ್ಧಾಳಿ…ಕನ್ನಡ ಚಿತ್ರರಂಗದ ಕ್ಷಮೆ ಕೋರಲು ಒತ್ತಾಯ..

ಮೈಸೂರು,ಮಾ6,Tv10 ಕನ್ನಡ

ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರ ಬಗ್ಗೆ ನಟ್ಟು- ಬೋಲ್ಟು ಪದ ಉಪಯೋಗಿಸಿ ಅವಮಾನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡನೀಯವಾದದ್ದು ಎಂದು ಭಾರತೀಯ ಜನತಾ ಪಕ್ಷದ ಕಲೆ ಮತ್ತು ಸಂಸ್ಕೃತಿಕ ಪ್ರಕೋಷ್ಠ ರಾಜ್ಯ ಸಂಚಾಲಕಿ ಡಾ.ರೂಪ ಅಯ್ಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಸಿನಿಮೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ನಟ- ನಟಿಯರ ಕುರಿತು ಮಾಡಿದ ಭಾಷಣದ ವೇಳೆ ಕಲಾವಿದರ ನಟ್ಟು- ಬೋಲ್ಟು ಸರಿ ಮಾಡ್ತೇನೆ ಎಂಬ ಅಸಡ್ಡೆ ಹೇಳಿಕೆ ನೀಡಿರುವ ಡಿಕೆ ಶಿವಕುಮಾರ್ ಕೂಡಲೇ ಚಿತ್ರರಂಗದವರ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.
ಚಿತ್ರರಂಗವದವರಿಗೆ ಅವರದ್ದೇ ಅದ ಗೌರವ, ಸ್ಥಾನಮಾನಗಳಿವೆ.ಅದರಲ್ಲೂ ನಟ- ನಟಿಯರು ಸೇರಿದಂತೆ ತಂತ್ರಜ್ಞರು,ಕಲಾವಿದರು ಹೀಗೆ ಸಾವಿರಾರು ಮಂದಿ ಚಿತ್ರರಂಗವನ್ನು ನಂಬಿ ಬದುಕುತ್ತಿದ್ದಾರೆ.ಆದರೆ ಅಂತವರಿಗೆ ಒಂದು ಸರ್ಕಾರಿ ಆಸ್ಪತ್ರೆಗೆ ಹೋದರೇ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ..ಅಲ್ಲದೇ ಸರ್ಕಾರದ ಸವಲತ್ತುಗಳು ದೊರಕುತ್ತಿಲ್ಲ.ಹಗಲಿರುಳೆನ್ನದೇ ದುಡಿಯುವ ಚಿತ್ರರಂಗವದ ಬಗ್ಗೆ ಮಾತನಾಡುವ ನೈತಿಕತೆ ಡಿಕೆಶಿ ಅವರಿಗಿಲ್ಲ ಎಂದು ಕಟಕಿಯಾಡಿದರು.
ಒಂದು ಸಿನಿಮಾ ಮಾಡಬೇಕಾದರೇ ಎಷ್ಟು ಕಷ್ಟಪಡಬೇಕಿದೆ.ಚಿತ್ರಕ್ಕೆ ಸಿಗುವ ಸಬ್ಸಿಡಿಗೆ ವರ್ಷಾನುಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆ. ಚಿತ್ರಕ್ಕೆ ಬಂಡವಾಳ ಹಾಕಿ ಕೈ ಸುಟ್ಟುಕೊಂಡು ಎಷ್ಟೋ ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಯೂ ಸಾಕಷ್ಟಿದೆ. ಅಣ್ಣಾವ್ರು ಡಾ.ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರುಗಳ ಕಾಲದಿಂದಲೂ ಕನ್ನಡ ಚಿತ್ರರಂಗಕ್ಕೆ,ಕನ್ನಡ ಕಲಾವಿದರಿಗೆ ಅವರದ್ದೇ ಆದ ಸ್ಥಾನ ಮಾನ,ಗೌರವವಿದೆ.ಇದನ್ನು ಅರಿಯದೇ ಬಾಯಿಗೆ ಬಂದಂತೆ ಮಾತನಾಡುವುದು ಸಲ್ಲದು ಎಂದಿದ್ದಾರೆ.
ಚಿತ್ರರಂಗದವರನ್ನು ಅವರ ಪಾಡಿಗೆ ಬಿಡಿ‌.ಕಲಾವಿದರ ಬಗ್ಗೆ ಹಗುರವಾಗಿ ಮಾತನಾಡಿ ನಿಮ್ಮ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ಕಿಡಿಕಾರಿದ್ದಾರೆ.
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾಡಿ ಹೊರ ರಾಜ್ಯ, ದೇಶಗಳಿಂದ ಇತರರನ್ನು ಕರೆಸಿ ಹೊಗಳಿ ಸನ್ಮಾನಿಸುವುದನ್ನು ಬಿಟ್ಟು, ನಮ್ಮ ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರಿಗೆ ಮನ್ನಣೆ ಕೊಟ್ಟು,ಪ್ರೋತ್ಸಾಹಿಸಿ.
ಇಲ್ಲದಿದ್ದರೆ ಸುಮ್ಮನಿದ್ದುಬಿಡಿ. ಅದನ್ನು ಬಿಟ್ಟು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿ ಕಲಾವಿದರನ್ನು ಅವಮಾನಿಸಬೇಡಿ ಎಂದು ಕಿಡಿಕಾರಿದ್ದಾರೆ.
ಇನ್ನೂ ಉಪಮುಖ್ಯಮಂತ್ರಿಯಾಗಿ ಕಲಾವಿದರ ಬಗ್ಗೆ ಮಾತನಾಡುವುದು ನಿಜಕ್ಕೂ ಅವರ ಹುದ್ದೆಗ ಶೋಭೆ ತರುವಂತದಲ್ಲ.ರಾಜಕೀಯವಾಗಿ ಅವರ ವ್ಯಾಪ್ತಿಯಲ್ಲಿ ಏನು ಬೇಕಾದರೂ ಮಾತನಾಡಿಕೊಳ್ಳಲಿ.ಅದನ್ನು ಬಿಟ್ಟು ಬಹಿರಂಗವಾಗಿ ಕನ್ನಡ ಚಿತ್ರರಂಗ ಹಾಗೂ ಕಲಾವಿದರ ಬಗ್ಗೆ ಅವಮಾನಿಸುವಂತಹ ಹೇಳಿಕೆ ನೀಡುವುದನ್ನು ಈ ಕೂಡಲೇ ನಿಲ್ಲಿಸಲಿ ಎಂದು‌ ರೂಪ ಅಯ್ಯರ್ ಒತ್ತಾಯಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *