
ಉದ್ಯೋಗಮೇಳಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ…
- TV10 Kannada Exclusive
- March 8, 2025
- No Comment
- 12
ಮೈಸೂರು,ಮಾ8,Tv10 ಕನ್ನಡ
ಉದ್ಯೋಗ ಮೇಳಗಳು ಪ್ರತಿ ತಾಲೂಕು ಮಟ್ಟದಲ್ಲಿ ನಡೆದಾಗ ಮಾತ್ರ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಇಂದು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಎಂಐಟಿ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಸಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಆಯ್ಕೆಯಾದ ಉದ್ಯೋಗ ಆಕಾಂಕ್ಷಿಗಳಿಗೆ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು.
ಈ ಉದ್ಯೋಗ ಮೇಳವು ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿದ್ದು ಈ ಉದ್ಯೋಗ ಮೇಳಕ್ಕೆ ಹೆಚ್ಚಿನ ಉದ್ಯೋಗ ಅಕಾಂಶಗಳು ಬರಬೇಕಾಗಿತ್ತು ಆದರೆ ಕಡಿಮೆ ನಿರುದ್ಯೋಗಿ ಯುವಕರು ಭಾಗವಹಿಸಿರುವುದು ಬೇಸರದ ಸಂಗತಿ ಆದ್ದರಿಂದ ಇನ್ನು ಮುಂದೆ ಪ್ರತಿ ತಾಲೂಕು ಮಟ್ಟದಲ್ಲಿ ಇಂತಹ ಉದ್ಯೋಗ ಮೇಳಗಳ ನಡೆಯಬೇಕು ನಿರುದ್ಯೋಗಿ ಯುವಕರು ಭಾಗವಹಿಸಬೇಕು ಈ ಮೇಳಕ್ಕೆ ಎಲ್ಲಾ ಕೈಗಾರಿಕಾ ಉದ್ಯಮಿಗಳು ಭಾಗವಹಿಸಬೇಕು. ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರಿಗೆ ಹಾಗೂ ಕೈಗಾರಿಕಾ ಸ್ಥಾಪನೆ ಮಾಡುವಂಥವರಿಗೆ ಅವಕಾಶ ಕಲ್ಪಿಸಿಕೊಡಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸಿಕೊಡಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತ ನಾಯಕ,ಗ್ರಾಮ ಪಂಚಾಯತಿ ಅಧ್ಯಕ್ಷೆ ನಾಗಮ್ಮ, ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ವಿಜಯ್ ತಗಡೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ,ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಜೇಶ್,ಗ್ರಾಮ ಪಂಚಾಯತಿ ಅಧ್ಯಕ್ಷ ನಾಗಮ್ಮ, ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಬಿಪಿ ಮಹಾದೇವ ಕೆ ಎಸ್ ಹುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೆಎಸ್ ರವಿ ಪುರಸಭೆ ಮಾಜಿ ಅಧ್ಯಕ್ಷ ಹೆಳವರ ಹುಂಡಿ ಸೋಮು,ಸುತ್ತೂರು ಸೋಮಣ್ಣ ಎಂ ದಕ್ಷಿಣ ಮೂರ್ತಿ ಬೊಕ್ಕಹಳ್ಳಿ ಸೋಮ ಸುಂದರ್ ಮಲ್ಲುಪುರ ಪ್ರಕಾಶ್ ಗುರುರಾಜು ಟಿ ಜೆ ಮಹದೇವ ಮರಳೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭುಸ್ವಾಮಿ ಜಿಎಂ ಸೂರಿ ಮಾಲೆಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು…