
ಕೊಪ್ಪಳದಲ್ಲಿ ಇಂದು ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ
- TV10 Kannada Exclusive
- March 9, 2025
- No Comment
- 11

ಸ್ಟಾರ್ ಆಫ್ ಮೈಸೂರ್ ಹಾಗೂ ಮೈಸೂರು ಮಿತ್ರ ಪತ್ರಿಕೆಯ ಮುಖ್ಯ ವರದಿಗಾರ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಎಸ್.ಟಿ. ರವಿಕುಮಾರ್ ಅವರಿಗೆ ಪಿ. ರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶಿವರಾಜ ಎಸ್. ತಂಗಡಗಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತ ಜಿ.ಎನ್. ಮೋಹನ್, ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ.ಕೆ. ರವಿ, ಶಾಸಕ ರಾಘವೇಂದ್ರ ಹಿಡ್ನಾಳ್, ಕೊಪ್ಪಳ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಹನುಮಂತ ಹಳ್ಳಿಕೇರಿ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.