ರೌಡಿ ಶೀಟರ್ ಬರ್ಬರ ಹತ್ಯೆ…ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ…ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ…

ರೌಡಿ ಶೀಟರ್ ಬರ್ಬರ ಹತ್ಯೆ…ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ…ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ…

ಮೈಸೂರು,ಮಾ14,Tv10 ಕನ್ನಡ

ಮೈಸೂರು ತಾಲೂಕು ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹನಗಳ್ಳಿಯ ತೋಟದ ಮನೆಯಲ್ಲಿ ರೌಡಿ ಶೀಟರ್ ಬರ್ಭರ ಹತ್ಯೆಯಾಗಿದೆ.ದೊರೆಸ್ವಾಮಿ.ಆ.ಸೂರ್ಯ ಮೃತ ರೌಡಿ ಶೀಟರ್.ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಾರಕಾಸ್ತ್ರದಿಂದ ನಾಲ್ಕಾರು ಕಡೆ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮಾರ್ಚ್ 12 ರ ರಾತ್ರಿ ಕೃತ್ಯ ನಡೆದಿರಬಹುದೆಂದು ಶಂಕಿಸಲಾಗಿದೆ.ದೊರೆಸ್ವಾಮಿ ವಿರುದ್ದ 4 ರಿಂದ 5 ಪ್ರಕರಣಗಳಿದ್ದ ಎಂಓಬಿ ಆಗಿದ್ದಾನೆ. 6 ತಿಂಗಳ ಹಿಂದೆ ಪತ್ನಿ ದೀಪಿಕಾ ಈತನಿಂದ ದೂರವಾಗಿದ್ದಾಳೆ.ಬೆಂಗಳೂರಿನ ಯುವತಿಯೊಬ್ಬಳ ಜೊತೆ ಸಂಪರ್ಕ ಇಟ್ಟುಕೊಂಡಿದ್ದನೆಂದು ಹೇಳಲಾಗಿದೆ. ಕೆಲವು ದಿನಗಳಿಂದ ಯುವತಿಯ ಜೊತೆ ಓಡಾಡಿರುವ ಮಾಹಿತಿ ಇದೆ.ಕೃತ್ಯ ನಡೆದ ಹಿಂದಿನ ದಿನವೂ ಸಹ ಯುವತಿಯ ಜೊತೆ ಇದ್ದನೆಂದು ಹೇಳಲಾಗಿದೆ.ಕೃತ್ಯ ನಡೆದ ಸ್ಥಳದಲ್ಲಿ ಹೋಟೆಲ್ ನಿಂದ ತಂದ ಪದಾರ್ಥಗಳು ಕಂಡು ಬಂದಿದೆ.ಎಣ್ಣೆ ಹೊಡೆದಿರುವ ಸುಳಿವು ಇದೆ.ಕೃತ್ಯ ನಡೆದ ನಂತರ ಯುವತಿ ನಾಪತ್ತೆಯಾಗಿದ್ದಾಳೆ.ಗ್ರಾಮದ ಜನತೆ ಜೊತೆ ಈತನ ಸಂಭಂಧ ಉತ್ತಮವಾಗಿರಲಿಲ್ಲ ಎಂದು ಹೇಳಲಾಗಿದೆ.ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ಮಲ್ಲಿಕ್,ಡಿವೈಎಸ್ಪಿ ಕರೀಂ ರಾವತರ್,ಜಯಪುರ ಠಾಣೆ ಎಸ್ಸೈ ಶಿವನಂಜಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳುಮುದ್ರೆ ಘಟಕದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.ಸಧ್ಯ ದೊರೆಸ್ವಾಮಿ ಜೊತೆಗೆ ಇದ್ದ ಯುವತಿಯ ಸುತ್ತು ಅನುಮಾನದ ಹುತ್ತ ಬೆಳೆದಿದೆ.ಯುವತಿಯ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *