
ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಯವರಿಂದ ಪಾದಯಾತ್ರೆ…ಉತ್ತಮ ಆರೋಗ್ಯಕ್ಕಾಗಿ ನಡಿಗೆ…
- TV10 Kannada Exclusive
- March 17, 2025
- No Comment
- 1621



ಮೈಸೂರು,ಮಾ17,Tv10 ಕನ್ನಡ
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಇಂದು ಕಿರಿಯ ಸ್ವಾಮೀಜಿಗಳಾ ಶ್ರೀ ದತ್ತವಿಜಯಾನಂದ ಸ್ವಾಮೀಜಿಯವರು ಪಾದಯಾತ್ರೆ ಕೈಗೊಂಡರು.
ವಿಶ್ವ ಶಾಂತಿ ಹಾಗೂ ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಖ್ಯದಡಿ
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಇಂದು ಪಾದಯಾತ್ರೆ ಹಮ್ಮಿಕೊಂಡರು.
ಇಂದು ಬೆಳಿಗ್ಗೆ 5.30ಕ್ಕೆ ದತ್ತಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಈ ಪಾದಯಾತ್ರೆ ಸಾಗಿತು.
ಮನುಷ್ಯನ ಉತ್ತಮ ಆರೋಗ್ಯಕ್ಕೆ ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬ ಕುರಿತು ಜನ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಈ ವಿಶೇಷ ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು…