ಪೊಲೀಸಪ್ಪನ ಮನೆಯಲ್ಲೇ ಕಳ್ಳತನ…ಅತ್ತಿಗೆಯಿಂದಲೇ ಕೈಚಳಕ…

ಮೈಸೂರು,ಮಾ18,Tv10 ಕನ್ನಡ

ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳುವಾದ ಪ್ರಕರಣ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಕೆ.ಆರ್.ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಭಾನ್ ಎಂಬುವರ ಮನೆಯಲ್ಲಿ 3 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿದೆ.ಸ್ವಂತ ಅತ್ತಿಗೆ ಕಳ್ಳತನ ಮಾಡಿದ್ದಾರೆಂದು ಸುಬಾನ್ ಪತ್ನಿ ಸಾದಿಯಾ ಆರೋಪಿಸಿದ್ದಾರೆ.ಅತ್ತಿಗೆ ಆಯೆಷಾ ಎಂಬುವರ ಮೇಲೆ ಆರೋಪ ಮಾಡಲಾಗಿದೆ.ರಾಜೀವ್ ನಗರದಲ್ಲಿ ಸುಬಾನ್ ರವರ ಮನೆ ಇದೆ.ಅಡಿಗೆ ಮನೆಯ ಡಬ್ಬದಲ್ಲಿ ಚಿನ್ನಾಭರಣ ಇಡುತ್ತಿದ್ದರು.ಈ ವಿಚಾರ ದಂಪತಿಗೆ ಹೊರತುಪಡಿಸಿದರೆ ಅತ್ತಿಗೆ ಆಯೆಷಾ ಗೆ ಮಾತ್ರ ಗೊತ್ತಿತ್ತು.ಹೀಗಾಗಿ ಆಯೆಷಾ ನೇ ಚಿನ್ನಾಭರಣ ಕಳುವು ಮಾಡಿದ್ದಾರೆಂದು ಆರೋಪಿಸಿದ್ದಾರೆ.ಸುಮಾರು 8 ತಿಂಗಳ ಹಿಂದೆ ಚಿನ್ನಾಭರಣ ಕಳುವಾಗಿದೆ.ಅನುಮಾನಗೊಂಡ ದಂಪತಿ ಪೊಲೀಸ್ ಠಾಣೆಗೆ ಕಂಪ್ಲೇಟ್ ಕೊಡುವುದಾಗಿ ಹೇಳಿದಾಗ ಆಯೆಷಾ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.ಹಿಂದಿರುಗಿಸಲು ಸಮಯ ತೆಗೆದುಕೊಂಡ ಆಯೆಷಾ ನಂತರ ಉಲ್ಟಾ ಹೊಡೆದಿದ್ದಾಳೆ.ಸಧ್ಯ ಸುಬಾನ್ ಪತ್ನಿ ಸಾದಿಯಾ ರವರು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಅತ್ತಿಗೆ ಆಯೆಷಾ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *