
ಗುಬ್ಬಚ್ಚಿ ದಿನಾಚರಣೆ…ಮೈಸೂರಿನಲ್ಲಿ ಪ್ರಾಣಿ ಪ್ರಿಯರಿಂದ ಗುಬ್ಬಚ್ಚಿ ಹಬ್ಬ…
- TV10 Kannada Exclusive
- March 20, 2025
- No Comment
- 36

ಮೈಸೂರು,ಮಾ20,Tv10 ಕನ್ನಡ
ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ಇಂದು ಪ್ರಾಣಿ ಪಕ್ಷಿಗಳ ಪ್ರೇಮಿಗಳು ಗುಬ್ಬಚ್ಚಿವಹಬ್ಬ ಆಚರಿಸಿದರು.ಮಹರಾಜ ಕಾಲೇಜು ಮೈದಾನದ ಬಳಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉರಗ ತಜ್ಞ ಸ್ನೇಕ್ ಶ್ಯಾಂ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿದೆ. ಆದ್ದರಿಂದ ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ ಎಂದು ಸಲಹೆ ನೀಡಿದರು.ಪಕ್ಷಿಗಳಿಗೆ ಬಟ್ಟಲು ಅಳವಡಿಸಿ ನೀರು ಹಾಗೂ ಆಹಾರ ಹಾಕುವ ಮೂಲಕ ಚಾಲನೆ ನೀಡಲಾಯಿತು.
ನಂತರ ಮಾತನಾಡಿದ ಚಿತ್ರನಟ ಆದಿ ಲೋಕೇಶ್
ಗುಬ್ಬಿ ಕಾಣಲು ಸಿಗುತ್ತಿಲ್ಲ. ಆದರೆ ನಮ್ಮ ಬಾಲ್ಯವನ್ನು ನೆನಪಿಡಿಸಿಕೊಂಡರೆ ಗುಬ್ಬಚ್ಚಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು.
ಆದರೆ ಇಂದು ಗುಬ್ಬಚ್ಚಿ ಸೇರಿದಂತೆ ಹಲವು ಪಕ್ಷಿ ಸಂಕುಲ ಅವಸಾನದಂಚಿನಲ್ಲಿದೆ ಎಂದರು. ಗುಬ್ಬಚ್ಚಿ ದಿನ ಮಾತ್ರ ಪಕ್ಷಿಗಳಿಗೆ ನೀರು ಆಹಾರ ನೀಡುವುದು ಮುಖ್ಯವಲ್ಲ ಪ್ರತಿದಿನವೂ ಸಹ ಪಕ್ಷಿ ಸಂಕುಲನವನ್ನು ಉಳಿಸಲು ತಮ್ಮ ತಮ್ಮ ಮನೆಯ ಮೇಲೆ ಪ್ರಾಣಿ ಪಕ್ಷಿಗಳಿಗೆ ನೀರಿನ ಬಟ್ಟಲು ಅಳವಡಿಸುವ ಕೆಲಸವಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ
ವನ್ಯಜೀವಿ ಮಂಡಳಿಯ ರಾಜ್ಯ ಸದಸ್ಯರಾದ ಡಾ. ಸಂತೃಪ್ತಿ ಗೌಡ,ಕೆ ಆರ್ ವಿಭಾಗದ ಉಪ ಪೊಲೀಸ್ ಆಯುಕ್ತರಾದ ರಮೇಶ್ ಕುಮಾರ್, ಉರುಗ ತಜ್ಞ ಸ್ನೇಕ್ ಶ್ಯಾಮ್, ಚಿತ್ರನಟ ಆದಿ ಲೋಕೇಶ್, ಸೌಮ್ಯ ಆದಿ ಲೋಕೇಶ್, ಕಿರುತರೆ ನಟ ಮಹೇಂದರ್, ಎನ್ ಎಂ ನವೀನ್ ಕುಮಾರ್,
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ವೈದ್ಯರಾದ ಶ್ರೀನಿವಾಸ್ ಆಚಾರ್,ಶ್ರೀನಿವಾಸ್ ಭಾಷ್ಯಂ, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಎಸ್ ಎನ್ ರಾಜೇಶ್, ಚಕ್ರಪಾಣಿ, ಸುಚೇಂದ್ರ, ಮಹಾನ್ ಶ್ರೇಯಸ್, ಮಿರ್ಲೆ ಪನಿಷ್, ರಾಕೇಶ್,
ಹಾಗೂ ಇನ್ನಿತರರು ಹಾಜರಿದ್ದರು..