
ಹಾಲು ಮೊಸರು ತಲೆ ಮೇಲೆ ಹೊತ್ತು ಪ್ರತಿಭಟನೆ…ಬೆಲೆ ಏರಿಕೆ ವಿರುದ್ದ ಆಕ್ರೋಷ…
- TV10 Kannada Exclusive
- March 28, 2025
- No Comment
- 169

ಮೈಸೂರು,ಮಾ28,Tv10 ಕನ್ನಡ
ಹಾಲು ಹಾಗೂ ಮೊಸರು ಬೆಲೆ ಏರಿಕೆ ಮಾಡಿದ ಸರ್ಕಾರದ ನಿಲುವನ್ನ ಖಂಡಿಸಿ ಕರ್ನಾಟಕ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಇಂದು ವಿನೂತನ ಪ್ರತಿಭಟನೆ ನಡೆಸಿದರು.ಹಾಲು ಮೊಸರನ್ನು ತಲೆ ಮೇಲೆ
ಹೊತ್ತು ಸರ್ಕಾರದ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಡಿ ದೇವರಾಜ ಅರಸು ರಸ್ತೆಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಹಾಲು ಮತ್ತು ಮೊಸರು ದರವನ್ನು
ಮೂರು ಬಾರಿ ಹೆಚ್ಚಳ
ಮಾಡಲಾಗಿದೆ.ಇದರಿಂದ
ಸಾರ್ವಜನಿಕರಿಗೆ ಹೊರೆ ಆಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್
ರಾಜ್ಯ ಸರ್ಕಾರ ರೈತರ ಹೆಸರಿನಲ್ಲಿ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರ ಮೇಲೆ ಬರೆ ಎಳೆಯುತ್ತಿದೆ.
ರಾಜ್ಯ ಸರ್ಕಾರ ದಿವಾಳಿಯಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇಂದು ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಒಂದು ವರ್ಷದಲ್ಲಿ ಎರಡು ಬಾರಿ ವಿದ್ಯುತ್ ಹೆಚ್ಚಳ ಮಾಡಿದ್ದಾರೆ. ದಿನೇ ದಿನೇ ವಸ್ತುಗಳ ಬೆಲೆ ಮುಗಿಲು ಮುಟ್ಟುತ್ತಿದೆ.ಏಕಾಏಕಿ ಬೆಲೆ ಏರಿಸುತ್ತಿರುವುದು ಸರಿಯಲ್ಲ.
ಬಡವರು ಹಾಗೂ ಮಧ್ಯಮ ವರ್ಗದವರಿಗೆ ಬಹಳ ತೊಂದರೆಯಾಗುತ್ತಿದ್ದು ಸರ್ಕಾರ ಈ ಕೂಡಲೇ ಇದರ ಬಗ್ಗೆ ಗಮನ ಹರಿಸಿ ಏರಿಕೆಯನ್ನು ಕೈಬಿಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಂಜುನಾಥ್ , ಎಸ್ ಎನ್ ರಾಜೇಶ್, ರವಿ, ಪ್ರಮೋದ್, ನಿತಿನ್, ಯತೀಶ್ ,ಬಾಬು, ಕಣ್ಣನ್ ,ಚಂದ್ರು, ಸಂತೋಷ್ ,ರವಿ, ಉಮೇಶ್ , ಈಶ್ವರ, ಬೆಳಕು ಮಂಜು ಹಾಗೂ ಇನ್ನಿತರರು ಭಾಗಿಯಾಗಿದ್ದರು…