ಮೈಸೂರು ಮೃಗಾಲಯದಲ್ಲಿ ಒರಾಂಗೂಟಾನ್ ಸಾವು…

ಮೈಸೂರು ಮೃಗಾಲಯದಲ್ಲಿ ಒರಾಂಗೂಟಾನ್ ಸಾವು…

ಮೈಸೂರು,ಏ4,Tv10 ಕನ್ನಡ

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಒರಾಂಗೂಟನ್ ಮೃತಪಟ್ಟಿದೆ. ಸುಮಾರು 10 ವರ್ಷ 8 ತಿಂಗಳ ಮಿನ್ನಿ ಹೆಣ್ಣು ಸಾವನ್ನಪ್ಪಿದೆ.
ಪ್ರಾಣಿ ವಿನಿಮಯ ಕಾರ್ಯಕ್ರಮದಡಿ 2021 ರಲ್ಲಿ ಮಲೇಷಿಯಾ ಮೃಗಾಲಯದಿಂದ ಮಿನ್ನಿಯನ್ನು ಆಮದು ಮಾಡಿಕೊಂಡ ನಂತರ ಸುಮಾರು 4 ವರ್ಷಗಳ ಅವಧಿಯವರೆಗೆ ಮೈಸೂರು ಮೃಗಾಲಯದಲ್ಲಿ ಪ್ರದರ್ಶನಕ್ಕಿಡಲಾಗಿತ್ತು.
ಮಿನ್ನಿಯು ಶ್ವಾಸಕೋಶ ಸಮಸ್ಯೆ ಹಿನ್ನೆಲೆಯಲ್ಲಿ ಆಗಾಗ ಉಸಿರಾಟದ ತೊಂದರೆಯಿಂದ ಬಳಲುತಿತ್ತು. ಚಿಕಿತ್ಸೆ ಫಲಿಸದೆ ಮಿನ್ನಿ ನಿಧನ ಹೊಂದಿದೆ.ಮೈಸೂರು ಮೃಗಾಲಯದ ತಜ್ಞ ಪಶುವೈದ್ಯರಿಂದ ಮೃಗಾಲಯದ ಪರೀಕ್ಷಾ ಕೊಠಡಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.ಯುನೈಟೆಡ್ ಕಿಂಗ್‌ಡಮ್ ಮತ್ತು ಮಲೇಷಿಯಾ ದೇಶಗಳ ಪಶುವೈದ್ಯ ತಜ್ಞರ ಮಾರ್ಗದರ್ಶನ ಮತ್ತು ಬೆಂಬಲದೊಂದಿಗೆ ಮೈಸೂರು ಮೃಗಾಲಯದ ಪಶುವೈದ್ಯರ ತಂಡದ ನಿರಂತರ ಪ್ರಯತ್ನಗಳ ನಡುವೆಯೂ ಮಿನ್ನಿಯ ಆರೋಗ್ಯ ಗಂಭೀರವಾಗಿತ್ತು.
ಮೃಗಾಲಯವು ಮಿನ್ನಿಯ ಆರೋಗ್ಯ ಸುಧಾರಣೆಗೆ ಸಾಧ್ಯವಿರುವ ಎಲ್ಲಾ ಬಗೆಯ ಚಿಕಿತ್ಸಾ ವಿಧಾನಗಳನ್ನು ಅನುಸರಿಸಿರುವುದು ಮಾತ್ರವಲ್ಲದೆ ಮಿನ್ನಿಯ ಚೇತರಿಕೆಗೆ ತೀವ್ರ ನಿಗಾ ವಹಿಸಲಾಗಿತ್ತು ಎಂದು ಮೃಗಾಲಯದ ಪ್ರಕಟಣೆ ಸ್ಪಷ್ಟಪಡಿಸಿದೆ.ಮಿನ್ನಿಯ ಅನಾರೋಗ್ಯದ ಮೂಲ ಕಾರಣಗಳನ್ನು ಅರಿಯುವ ಉದ್ದೇಶದಿಂದ ಹೆಚ್ಚಿನ ತನಿಖೆಗಾಗಿ ಅದರ ಜೈವಿಕ ಮಾದರಿಗಳನ್ನು ಸುಧಾರಿತ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಹಾಗೂ ದೃಢೀಕೃತ ರೋಗ ನಿರ್ಣಯದ ವರದಿಗಾಗಿ ಕಾಯಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *