
ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ…ಶಿಕ್ಷಕ ಅಂದರ್…ಮುಖ್ಯ ಶಿಕ್ಷಕನ ವಿರುದ್ದ FIR…
- TV10 Kannada Exclusive
- April 9, 2025
- No Comment
- 45
ಮೈಸೂರು,ಏ10,Tv10 ಕನ್ನಡ
ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆ ಮೈಸೂರು ವಿಜಯನಗರ ಠಾಣೆ ಪೊಲೀಸರು ಶಿಕ್ಷಕನೊರ್ವನನ್ನ ಬಂಧಿಸಿದ್ದಾರೆ.ಲೈಂಗಿಕ ಕಿರುಕುಳದ ಬಗ್ಗೆ ಬರೋಬ್ಬರಿ 20 ವಿದ್ಯಾರ್ಥಿನಿಯರು ದೂರು ಸಲ್ಲಿಸಿದ ಹಿನ್ನಲೆ ಕ್ರಮ ಕೈಗೊಳ್ಳಲಾಗಿದೆ.
ಮೂಲತಃ ತಿ.ನರಸೀಪರ ನಿವಾಸಿ ಹಾಗೂ ನಗರದ ವಿಜಯನಗರದಲ್ಲಿನ ಸಿದ್ದೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ತೋಟಗಾರಿಕೆ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಚ್.ಎಂ.ಶಿವಮೂರ್ತಿ ಎಂಬಾತನೇ ಬಂಧಿತ.ಕೃತ್ಯದ ಬಗ್ಗೆ ಕೂಡಲೇ ಇಲಾಖೆಯ ಗಮನಕ್ಕೆ ತರದೆ ತಡ ಮಾಡಿದ ಆರೋಪದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಮುರಳೀಧರರಾವ್ ವಿರುದ್ಧವೂ ದೂರು ದಾಖಲಾಗಿದೆ.
ಪ್ರೌಢಶಾಲೆ ವ್ಯಾಸಂಗಕ್ಕಾಗಿ ಬಿಸಿಎಂ ಹಾಗೂ ಇನ್ನಿತರ ಸರ್ಕಾರಿ ಹಾಸ್ಟೆಲ್ಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದು ಉಳಿದುಕೊಂಡಿದ್ದ ವಿದ್ಯಾರ್ಥಿನಿಯರು ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕಳೆದ ಕೆಲ ದಿನಗಳ ಹಿಂದಿನಿಂದಲೂ ಶಿಕ್ಷಕ ಶಿವಮೂರ್ತಿ, ಮಕ್ಕಳಿಗೆ ಆಗಿಂದಾಗ್ಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಈ ಸಂಬಂದ ಮಾರ್ಚ್ 14 ರಂದು ಅಲ್ಲಿನ ಸುಮಾರು 20 ವಿದ್ಯಾರ್ಥಿನಿಯರು ಶಾಲೆಯ ಶಿಕ್ಷಕಿ ತನುಜಾ ಎಂಬವರಿಗೆ ಮಾಹಿತಿ ನೀಡಿದ್ದಾರೆ. ಅವರು ತಕ್ಷಣವೇ ಮುಖ್ಯ ಶಿಕ್ಷಕ ಮುರಳೀಧರ್ ಅವರಿಗೆ ವಿಚಾರ ತಿಳಿಸಿದ್ದಾರೆ.
ಈ ಸಂಬಂದ ಸಂತ್ರಸ್ತ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿ ವರದಿ ನೀಡುವಂತೆ ಮುರಳೀಧರ್ ಅವರು ಶಿಕ್ಷಕಿಯರಾದ ಉಷಾ ಹಾಗೂ ನಂದಿನಿಗೆ ಜವಾಬ್ದಾರಿ ನೀಡಿದ್ದಾರೆ. ಅವರು ಮಾ.17 ರಂದು ಮುಖ್ಯ ಶಿಕ್ಷಕರಿಗೆ ವರದಿ ನೀಡಿದ್ದಾರೆ. ನಂತರ ಶಿಕ್ಷಕ ಶಿವಮೂರ್ತಿ ಅವರು ವಿದ್ಯಾರ್ಥಿನಿಯರ ಆರೋಪವನ್ನು ನಿರಾಕರಿಸಿದ್ದಾರೆ.
ಆದರೂ ಈ ಸಂಬಂದ ಮುರಳೀಧರ್ ಅವರು ಸಂಸ್ಥೆಯ ಆಡಳಿತ ಮಂಡಳಿಗೆ ಮಕ್ಕಳು ಬರೆದಿದ್ದ ದೂರು ಪತ್ರ ಹಾಗೂ ಶಿಕ್ಷಕಿಯರು ನೀಡಿದ್ದ ವರದಿಯನ್ನು ಸಲ್ಲಿಸಿದ್ದಾರೆ. ಈ ನಡುವೆ ಅಲ್ಲಿನ ಮಕ್ಕಳಲ್ಲಿ ಕೆಲವರು ಮಕ್ಕಳ ಸಹಾಯವಾಣಿಗೆ ವಿಚಾರ ಮುಟ್ಟಿಸಿದ್ದಾರೆ.
ಮಕ್ಕಳ ಸಹಾಯವಾಣಿಯ ಅಧಿಕಾರಿಗಳು ಡಿಡಿಪಿಐಗೆ ವಿಚಾರ ಮುಟ್ಟಿಸಿದ್ದಾರೆ. ತಕ್ಷಣವೇ ಕಾರ್ಯಪ್ರೌವೃತ್ತರಾದ ಡಿಡಿಪಿಐ ಜವರೇಗೌಡ ಅವರು ಸಂಬಂದಪಟ್ಟ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ರೇವಣ್ಣ ಅವರಿಗೆ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ.
ಇದರಿಂದಾಗಿ ಇಡೀ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದಾರೆ. ಸರಿಯಾದ ಸಮಯಕ್ಕೆ ವಿಚಾರ ಮುಟ್ಟಿಸದ ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಂತರ ವಿಜಯನಗರ ಪೊಲೀಸ್ ಠಾಣೆಗೆ ತೆರಳಿ ಏ.4 ರಂದು ಶಿಕ್ಷಕ ಶಿವಮೂರ್ತಿ ಹಾಗೂ ಮುಖ್ಯ ಶಿಕ್ಷಕ ಮುರಳೀಧರ ರಾವ್ ವಿರುದ್ಧ ದೂರು ದಾಖಲಿಸಿದ್ದಾರೆ. ಇದೀಗ ಶಿವಮೂರ್ತಿ ಅವರ ಮೇಲೆ ಫೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಅನುದಾನಿತ ಶಾಲೆಯಾದ ಕಾರಣ ನಾವು ನೇರವಾಗಿ ಕ್ರಮ ತಗೆದುಕೊಳ್ಳಲು ಬರುವುದಿಲ್ಲ. ಬಿಇಒ ನೀಡಿರುವ ವರದಿಯ ಅನ್ವಯ ಶಿವಮೂರ್ತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳವಂತೆ ಸಿದ್ದೇಶ್ವರ ಶಾಲೆಯ ಆಡಳಿತ ಮಂಡಳಿಗೆ ಪತ್ರ ಬರೆಯಲಾಗುತ್ತದೆ. ಅವರ ಆತನ ವಿರುದ್ಧ ಯಾವ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ ಎಂಬುದನ್ನು ನಮಗೆ ವರದಿ ಮೂಲಕ ತಿಳಿಸಲಿದ್ದಾರೆ ಎಂದು ಡಿಡಿಪಿಐ
ಎಸ್.ಟಿ.ಜವರೇಗೌಡ ತಿಳಿಸಿದ್ದಾರೆ…