
ಬನ್ನೂರು ಹೊಸ ಸೇತುವೆ ಉದ್ಘಾಟಿಸಿ…ಜಿಲ್ಲಾಉಸ್ತುವಾರಿ ಸಚಿವರಿಗೆ ರೈತ ಮುಖಂಡರ ಮನವಿ…
- TV10 Kannada Exclusive
- April 16, 2025
- No Comment
- 170
ಬನ್ನೂರು,ಏ16,
ಬನ್ನೂರು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹೊಸ ಸೇತುವೆಯನ್ನ ಶೀಘ್ರದಲ್ಲಿ ಲೋಕಾರ್ಪಣೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ರೈತ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ರವರಿಗೆ ಮನವಿ ಪತ್ರ ಸಲ್ಲಿಸಿದರು.ಕರ್ನಾಟಕ ರಾಜ್ಯ ಮೂಲ ರೈತಸಂಘಟನೆಯ ಜಿಲ್ಲಾಧ್ಯಕ್ಷ ಬನ್ನೂರು ನಾರಾಯಣ್ ನೇತೃತ್ವದ ತಂಡ ಬೆಂಗಳೂರಿನ ಸಚಿವರ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿತು.
ಸೇತುವೆ ಬಳಿ ನಡೆದ ಅಪಘಾತದಲ್ಲಿ ತಾಯಿ ಮಗ ಸಾವನ್ನಪ್ಪಿದ ಘಟನೆಯ ಮಾಹಿತಿಯನ್ನ ಸಚಿವರಿಗೆ ತಿಳಿಸಿ ಹೊಸ ಸೇತುವೆಯನ್ನು ಉದ್ಘಾಟನೆ ಮಾಡಿ ಸಾರ್ವಜನಿಕರಿಗೆ ವಾಹನ ಸವಾರರಿಗೆ ಸರಾಗವಾಗಿ ಓಡಾಡಲು ಅನುಕೂಲ ಮಾಡಿಕೊಡುವಂತೆ
ಮನವಿ ಮಾಡಿದರು. ಸಚಿವರು ಸ್ಪಂದಿಸಿ ಕೂಡಲೇ ಸಂಬಂಧಪಟ್ಟ ಇಲಾಖೆ ಸಭೆ ಕರೆದು ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸೇತುವೆಯನ್ನು ಉದ್ಘಾಟಿಸಲು ಸಂಪೂರ್ಣ ಸಹಕಾರವಿದೆ ಎಂದು ಭರವಸೆ ನೀಡಿದ್ದಾರೆ…