
ಹೆದ್ದಾರಿಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್…ಪ್ರಯಾಣಿಕರು ಪಾರು…
- TV10 Kannada Exclusive
- April 26, 2025
- No Comment
- 98

ಮಂಡ್ಯ,ಏ26,Tv10 ಕನ್ನಡ
ಚಲಿಸುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ.ಸುಮಾರು 25 ಪ್ರಯಾಣಿಕರು
ಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು-ಮಂಗಳೂರು ಹೈವೇಯಲ್ಲಿ
ಉಡುಪಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ನಲ್ಲಿ
ಇದ್ದಕ್ಕಿದ್ದ ಹಾ ಬೆಂಕಿಗೆ ಕಾಣಿಸಿಕೊಂಡಿದೆ.
ಬೆಳಗಿನ ಜಾವ 5 ಗಂಟೆಯಲ್ಲಿ ಘಟನೆ ನಡೆದಿದೆ.ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರನ್ನ ಬಸ್ ನಿಂದ ಕೆಳಗಿಳಿಸಲಾಗಿದೆ.
ಬಸ್ ನಿಲ್ಲಿಸುತ್ತಿದ್ದಂತೆ ಬಸ್ ಹೊತ್ತಿ ಉರಿದು ಸುಟ್ಟುಕರುಕಲಾಗಿದೆ.
ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…