ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ ಆಸ್ತಿ ಕಬಳಿಸಲು ದಾಖಲೆ ಮಾಡಿಕೊಟ್ಟ ಆರೋಪ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಅನುಮತಿ ಕೋರಿ ಪತ್ರ…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ ಆಸ್ತಿ ಕಬಳಿಸಲು ದಾಖಲೆ ಮಾಡಿಕೊಟ್ಟ ಆರೋಪ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಅನುಮತಿ ಕೋರಿ ಪತ್ರ…

ಮೈಸೂರು,ಏ29,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಮತ್ತೊಂದು ವಿಕೆಟ್ ಉರುಳಲಿದೆ.ಕೆಲವೇ ದಿನಗಳ ಹಿಂದೆ ಒಬ್ಬರನ್ನ ಅಮಾನತುಗೊಳಿಸಿದ್ದ ಆಯುಕ್ತರು ಇಂದು ಮತ್ತೊಬ್ಬ ಅಧಿಕಾರಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಸಜ್ಜಾಗಿದ್ದಾರೆ.ಸೂಕ್ತ ಕ್ರಮ ಕೈಗೊಳ್ಳಲು ಅನುಮತಿ ಕೋರಿ ನಗರಾಭಿವೃದ್ದಿ ಪ್ರಾಧಿಕಾರ ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ನೀಡಿದ ದೂರಿನ ಹಿನ್ನಲೆ ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನಲೆ ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಅನುಮತಿ ಕೋರಿ ಪತ್ರ ಬರೆದಿದ್ದಾರೆ.

ಮೈಸೂರು ಗೋಕುಲಂ ಬಡಾವಣೆ 3 ನೇ ಹಂತ ಮಾದರಿ ಮನೆ ನಂ.867 30*40 ವಿಸ್ತೀರ್ಣದ ಮನೆ 2-11-1982 ರಲ್ಲಿ ಲಿಲಿಯನ್ ಶಾರದಾ ಜೋಸೆಫ್ ರವರಿಗೆ ಮಂಜೂರಾಗಿದ್ದು ಕರಾರು ಪತ್ರ ನೀಡಲಾಗಿದೆ.ಲಿಲಿಯನ್ ಜೋಸೆಫ್ ರವರು 3-09-1993 ರಲ್ಲಿ ಮರಣ ಹೊಂದಿರುತ್ತಾರೆ.6-04-2024 ರ ವರೆಗೆ ಸದರಿ ಸ್ವತ್ತು ಯಾರಿಗೂ ವರ್ಗಾವಣೆ ಆಗಿರುವುದಿಲ್ಲ.ಆದ್ರೆ 26-03-2024 ರಲ್ಲಿ ಕ್ರಮಬದ್ದವಲ್ಲದ ವಾರಸುದಾರ ವ್ಯಕ್ತಿಗೆ ಅಂದ್ರೆ ನೆವಿಲ್ ಮಾರ್ಕಸ್ ಜೋಸೆಫ್ ಹೆಸರಿಗೆ ವಂಶವೃಕ್ಷ ಪಡೆಯದೆ ಪೌತಿಖಾತೆ ವರ್ಗಾವಣೆ ಮಾಡಿ ಹಾಗೂ ತುಂಡುಜಾಗ ಮಂಜೂರು ಮಾಡಿ ಹಕ್ಕುಪತ್ರ ನೀಡಲಾಗಿದೆ.ಈ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಬಿ.ಎನ್.ನಾಗೇಂದ್ರ ಮುಡಾ ಆಯುಕ್ತರಿಗೆ ದೂರು ನೀಡಿದ್ದರು.ಈ ಅಕ್ರಮ ಮಾಧ್ಯಮಗಳಲ್ಲೂ ಸಹ ವರದಿಯಾಗಿತ್ತು.ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಮುಡಾ ಕಾರ್ಯದರ್ಶಿ ದಾಖಲೆಗಳನ್ನ ಪರಿಶೀಲಿಸಿ ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನಲೆ ಆಯುಕ್ತರಿಗೆ ವರದಿ ಸಲ್ಲಿಸಿದ್ದರು. ಎಚ್ಚೆತ್ತ ಮುಡಾ ಆಯುಕ್ತರು ಕಾರ್ಯದರ್ಶಿಗಳ ವರದಿ ಆಧಾರದ ಮೇಲೆ ವ್ಯವಸ್ಥಾಪಕ ಸೋಮಸುಂದ್ರು ರವರನ್ನ ಅಮಾನತು ಪಡಿಸಿದ್ದರು.ಮುಡಾದಲ್ಲಿ ಕ್ರಯಪತ್ರ ನೀಡುವ ಹಾಗೂ ಅನುಮೋದನೆ ನೀಡುವ ಅಧಿಕಾರ ಕಾರ್ಯದರ್ಶಿಗಳಿಗೆ ನೀಡಲಾಗಿದೆ.ಆದರೆ ಕಾರ್ಯದರ್ಶಿಗಳಿಂದ ಅನುಮೋದನೆ ಪಡೆಯದೆ ಕಡತಗಳನ್ನ ಸಲ್ಲಿಸದೆ ತಮಗಿಷ್ಟ ಬಂದಂತೆ ಟಿಪ್ಪಣಿಗಳನ್ನ ಸಿದ್ದಪಡಿಸಿ ವ್ಯವಸ್ಥಾಪಕ ಸೋಮಸುಂದ್ರು ಹಾಗೂ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸದರಿ ಆಸ್ತಿಗೆ ತಿದ್ದುಪಡಿ ಹಕ್ಕುಪತ್ರ ನೀಡಿದ್ದಾರೆ.ಆಯುಕ್ತರ ಆದೇಶ ಮೀರಿ ತಮ್ಮ ಹಂತದಲ್ಲಿಯೇ ತಿದ್ದುಪಡಿ ಕ್ರಯಪತ್ರ ನೀಡಿ ಅಧಿಕಾರ ದುರುಪಯೋಗ ಮಾಡಿಕೊಂಡ ಆರೋಪದ ಹಿನ್ನಲೆ ವ್ಯವಸ್ಥಾಪಕ ಸೋಮಸುಂದ್ರು ರವರನ್ನ ಅಮಾನತುಗೊಳಿಸಲಾಗಿತ್ತು.ಈ ಅಕ್ರಮಕ್ಕೆ ಸಾಥ್ ನೀಡಿದ ವಿಶೇಷ ತಹಸೀಲ್ದಾರ್ ಗ್ರೂಪ್ ಬಿ ಅಧಿಕಾರಿಯಾದ ಕಾರಣ ಮುಂದಿನ ಸೂಕ್ತ ಕ್ರಮ ಕೈಗೊಳ್ಳಲು ಮುಡಾ ಆಯುಕ್ತರು ಸರ್ಕಾರಕ್ಕೆ ಅನುಮತಿ ಕೋರಿ ಪತ್ರ ಬರೆದಿದ್ದಾರೆ.ಮರಣಹೊಂದಿದ ವ್ಯಕ್ತಿಯ ಆಸ್ತಿ ಕಬಳಿಸಲು ವಂಚಕರಿಗೆ ನೆರವಾದ ಆರೋಪದಡಿ ಮುಡಾದಲ್ಲಿ ಎರಡನೇ ವಿಕೆಟ್ ಉರುಳಲಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *