
ರಸ್ತೆ ಅಗಲೀಕರಣಕ್ಕೆ ಮೀಸಲಾದ ಜಾಗದಲ್ಲಿ ಅಕ್ರಮ ಕಟ್ಟಡ…ಸೂಕ್ತ ಕ್ರಮ ಕೈಗೊಳ್ಳುವಂತೆ ಮುಡಾದಿಂದ ಪಾಲಿಕೆಗೆ ಪತ್ರ…
- TV10 Kannada Exclusive
- May 21, 2025
- No Comment
- 205
ಮೈಸೂರು,ಮೇ21,Tv10 ಕನ್ನಡ
ಸಿಎ ನಿವೇಶನದ ರಸ್ತೆ ಅಗಲೀಕರಣಕ್ಕಾಗಿ ಮೀಸಲಿರಿಸಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿರುವುದನ್ನ ಮುಡಾ ವಲಯ ಅಧಿಕಾರಿಗಳು ಪತ್ತೆ ಹಚ್ಚಿದ್ದು ತುರ್ತಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆಗೆ ಪತ್ರ ಬರೆದಿದ್ದಾರೆ.
ಮೈಸೂರು ನಗರ ಕಾಳಿದಾಸ ರಸ್ತೆ ಪಂಚವಟಿ ಸರ್ಕಲ್ ಬಳಿ ಇರುವ ಸಿಎ ನಿವೇಶನದ ರಸ್ತೆ ಅಗಲೀಕರಣಕ್ಕಾಗಿ ಮೀಸಲಾದ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವುದಾಗಿ ಮುಡಾ ವಲಯ 4 ರ ಅಧಿಕಾರಿಗಳು ಪತ್ತೆ ಹಚ್ಚಿದ್ದು.ಈ ಬಗ್ಗೆ ನಿಯಮಾನುಸಾರ ಪರಿಶೀಲನೆ ನಡೆಸಿ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ಆಯುಕ್ತರಿಗೆ ಪತ್ರ ಬರೆದಿದ್ದಾರೆ…