
ಸಾಲಬಾಧೆ:ರೈತ ಆತ್ಮಹತ್ಯೆ…
- TV10 Kannada Exclusive
- May 28, 2025
- No Comment
- 7
ಮಂಡ್ಯ,ಮೇ28,Tv10 ಕನ್ನಡ
ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮತ್ಯೆಗೆ ಶರಣಾದ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮರಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರೈತ ಮಂಜೇಗೌಡ (45) ಆತ್ಮತ್ಯೆಗೆ ಶರಣಾದವರು.
ಮಂಡ್ಯದ ಕೆ.ಆರ್.ಪೇಟೆ ತಾ. ಸಾಧುಗೋನಹಳ್ಳಿ ಸಮೀಪದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.ವಿವಿಧ ಬ್ಯಾಂಕಿನಲ್ಲಿ ಸಾಲ, ಖಾಸಗಿ ವ್ಯಕ್ತಿಗಳಿಂದಲೂ 5 ಲಕ್ಷದವರೆಗೂ ಕೈ ಸಾಲ ಮಾಡಿಕೊಂಡಿದ್ದರು.
ಸಾಲದ ಸುಳಿಯಲ್ಲಿ ಸಿಲುಕಿ ಮನನೊಂದು ನೇಣಿಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.