ಮರಕ್ಕೆ ಢಿಕ್ಕಿ ಹೊಡೆದ ಕಾರು…ಇಬ್ಬರ ಸಾವು…
- Mysore
- May 28, 2025
- No Comment
- 123




ಸಾಲಿಗ್ರಾಮ,ಮೇ28,Tv10 ಕನ್ನಡ
ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಮರಕ್ಕೆ ಡಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ
ಸಾಲಿಗ್ರಾಮ ತಾಲೂಕಿನ ಬೈಲಾಪುರ ಗ್ರಾಮದ ಬಳಿ ನಡೆದಿದೆ.
ಖಲಿಂರೆಹಮಾನ್ (65) ಶೇಖ್ ಅಬ್ದುಲ್ ಖಾದರ್ (45)
ಮೃತರು.ಹಾಸನದ ಲಕ್ಷ್ಮಿಪುರಂ ಬಡಾವಣೆಯ ನಿವಾಸಿಗಳು.ಕಾರಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಷೇಕ್ ಮುನೀರ್ ಅಹಮದ್‌ಗೆ ಗಾಯವಾಗಿದೆ.
ಬೈಲಾಪುರ ಗ್ರಾಮದ ಬಳಿ ಪೈಪ್ ಹಾಕಲು ತೆಗೆಯಲಾಗಿದ್ದ ಹಳ್ಳ ಮುಚ್ಚಿರಲಿಲ್ಲ ಹೀಗಾಗಿ ಸ್ಥಳದಲ್ಲಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಸಾಲಿಗ್ರಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…