
ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಸಾವು…
- Crime
- June 7, 2025
- No Comment
- 53
ಕೊಡಗು,ಜೂ7,Tv10 ಕನ್ನಡ
ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಯಾದ ಘಟನೆ
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.
ಪುರುಷೋತ್ತಮ (72 ) ಮೃತ ದುರ್ದೈವಿ.
ಮನೆಯ ಸಮೀಪದ ಕಾಫಿ ತೋಟದಲ್ಲಿ ಘಟನೆ ನಡೆದಿದೆ.
ಕಾಫಿ ತೋಟದಿಂದ ಮನೆಗೆ ಬರುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ.
ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆ.
ಕಳೆದ ಹಲವು ತಿಂಗಳಿನಿಂದಲೂ ಕರಡಿಗೋಡು ಸುತ್ತಮುತ್ತಲ ಕಾಫಿ ತೋಟದಲ್ಲಿ ದಿನನಿತ್ಯ ಕಾಡಾನೆಗಳ ಹಿಂಡು ಕಾಣಿಸಿಕೊಳ್ಳುತ್ತಿದೆ.
ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ…