ಪ್ರಿಯತಮೆಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನ ಜಮೀನಿನಲ್ಲಿ ಶವ ಹೂತಿಟ್ಟ ಐನಾತಿ…ಪ್ರಿಯಕರ ಅಂದರ್…

ಪ್ರಿಯತಮೆಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನ ಜಮೀನಿನಲ್ಲಿ ಶವ ಹೂತಿಟ್ಟ ಐನಾತಿ…ಪ್ರಿಯಕರ ಅಂದರ್…

ಮಂಡ್ಯ,ಜೂ24,Tv10 ಕನ್ನಡ

ವಿವಾಹಿತ ಮಹಿಳೆಯನ್ನ ಇನ್ಸ್ಟಾಗ್ರಾಂ ನಲ್ಲಿ ಪರಿಚಯಿಸಿಕೊಂಡು ಪ್ರೀತಿಸಿ ಚೆಕ್ಕಂದವಾಗಿ ವಿಹರಿಸಿ ಹತ್ತೇ ದಿನಗಳಲ್ಲಿ ಕೊಲೈಗೈದು ಶವವನ್ನ ತನ್ನ ಜಮೀನಿನಲ್ಲೇ ಬಚ್ಚಿಟ್ಟ ಪ್ರಿಯಕರ ಪೊಲೀಸರ ಅತಿಥಿಯಾದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಕರೋಟಿ ಗ್ರಾಮದಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ ಪ್ರಿಯಕರನಿಂದ ಕೊಲೆ ಆದವಳು.ಕರೋಟಿ ಗ್ರಾಮದ ಪುನೀತ್ ಹಂತಕ.ಇನ್ಸ್ಟಾಗ್ರಾಂ ನಲ್ಲಿ ಪ್ರೀತಿಯನ್ನ ಪುನೀತ್ ಪರಿಚಯ ಮಾಡಿಕೊಂಡಿದ್ದಾನೆ.
ಹತ್ತೇ ದಿನದಲ್ಲಿ ಪ್ರೀತಿ-ಪ್ರೇಮ, ಪ್ರಣಯ ಶುರುವಾಗಿದೆ.
ಬೆಳಿಗ್ಗೆ ಮೈಸೂರು, ಮಂಡ್ಯದಲ್ಲಿ ಜಾಲಿ ರೈಡ್ ಮಾಡಿದ್ದಾರೆ.ಸಂಜೆ ಪ್ರಿಯತಮೆ ಮೈಮೇಲಿದ್ದ ಚಿನ್ನಾಭರಣ ದೋಚಿ ಬರ್ಬರ ಹತ್ಯೆ ಮಾಡಿದ್ದಾನೆ.ಗಂಡ, ಮಕ್ಕಳಿದ್ದರೂ ಪುನೀತ್ ಜೊತೆ ಪ್ರೀತಿ ಲವ್ ನಲ್ಲಿ ಬಿದ್ದಿದ್ದಳು.ಕಳೆದ ಭಾನುವಾರ ಮೈಸೂರಿಗೆ ಒಟ್ಟಿಗೆ ಕಾರಿನಲ್ಲಿ ತೆರಳಿದ್ದರು.ಇಬ್ಬರು ಮೈಸೂರು, ಮಂಡ್ಯ ಪ್ರವಾಸಿ ಸ್ಥಳಗಳಲ್ಲಿ ಸುತ್ತಾಡಿ ಎಂಜಾಯ್‌ ಮಾಡಿದ್ದಾರೆ.ನಂತರ ಕೆ.ಆರ್.ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶದಲ್ಲಿ ಇಬ್ಬರ ನಡುವೆ ಜಗಳ ಆಗಿದೆ.
ಅಲ್ಲೆ ಕೊಲೆಗೈದು ಚಿನ್ನಾಭರಣ ದೋಚಿದ ಐನಾತಿ ಬಳಿಕ ಕರೋಟಿ ಗ್ರಾಮದ ತನ್ನ ಜಮೀನಿನಲ್ಲಿ ಪ್ರಿಯತಮೆ ಶವ ಬಚ್ಚಿಟ್ಟಿದ್ದಾನೆ.
ಪ್ರಿಯತಮೆ ಪೋನ್ ಗೆ ಬಂದ ಕಾಲ್ ನಿಂದಲೇ ಪುನೀತ್ ಸಿಕ್ಕಿಬಿದ್ದಿದ್ದಾನೆ.
ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *