ಯುವತಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ…ನಾಲ್ವರ ವಿರುದ್ದ FIR ದಾಖಲು…

ಯುವತಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಜು24,Tv10 ಕನ್ನಡ

ಮದುವೆ ಆಗುವುದಾಗಿ ನಂಬಿಸಿ ಚೆಕ್ ಗಳನ್ನ ಪಡೆದು ಬೌನ್ಸ್ ಮಾಡಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಟಾರ್ಚರ್ ನೀಡಿದ ಆರೋಪದ ಮೇಲೆ ಮೈಸೂರು ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ನೊಂದ ಯುವತಿ ಪ್ರಕರಣ ದಾಖಲಿಸಿದ್ದಾಳೆ.ತುಮಕೂರು ಮೂಲದ ಸದಾನಂದಗೌಡ,ಇವರ ಅಕ್ಕ ರಾಜಮ್ಮ,ಭಾವ ಹನುಮಂತಪ್ಪ ಹಾಗೂ ದಯಾನಂದ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.

9 ವರ್ಷಗಳ ಹಿಂದೆ ಯುವತಿಗೆ ಸದಾನಂದ್ ಪರಿಚಯವಾಗಿದೆ.ಸ್ನೇಹ ಪ್ರೀತಿಗೆ ತಿರುಗಿ ಮದುವೆ ಪ್ರಸ್ತಾಪವಾಗಿದೆ.ಬೈಕ್ ಕೊಡಿಸುವ ನೆಪದಲ್ಲಿ ಸದಾನಂದ್ ಯುವತಿಯಿಂದ ಚೆಕ್ ಗಳನ್ನ ಪಡೆದಿದ್ದಾನೆ.ಬೈಕ್ ಹಣ ಹಿಂದಿರುಗಿಸಿದರೂ ಚೆಕ್ ಗಳನ್ನ ಹಿಂದಿರುಗಿಸಿಲ್ಲ.ನಂತರ ಮದುವೆ ಆಗುವುದಾಗಿ ನಂಬಿಸಿದ್ದಾನೆ.ಇಬ್ಬರೂ ಹಲವಾರು ಫೋಟೋಗಳನ್ನ ತೆಗೆಸಿಕೊಂಡಿದ್ದಾರೆ.ಎರಡು ವರ್ಷಗಳ ನಂತರ ಜಾತಿ ನೆಪ ಒಡ್ಡಿ ಮದುವೆ ನಿರಾಕರಿಸಿದ್ದಾನೆ.ಇದರಿಂದಾಗಿ ಯುವತಿ ಅಂತರ ಕಾಯ್ದುಕೊಂಡಿದ್ದಾಳೆ.ಕೆಲಕಾಲ ಸುಮ್ಮನಿದ್ದ ಸದಾನಂದ್ ಮತ್ತೆ ಸಂಪರ್ಕಕ್ಕೆ ಬಂದು ಮನೆಯಿಂದ ಮತ್ತೆ ಚೆಕ್ ಗಳನ್ನ ಕದ್ದು ಸ್ನೇಹಿತನ ಹೆಸರಲ್ಲಿ 8,50,000/- ಕ್ಕೆ ಬೌನ್ಸ್ ಮಾಡಿಸಿದ್ದಾನೆ.ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿದೆ.ಮನೆಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದನೆಂದು ಆರೋಪಿಸುವ ನೊಂದ ಯುವತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ಅನುಭವಿಸಿದ್ದಾಳೆ.ಬೇರೊಬ್ಬನ ಜೊತೆ ವಿವಾಹ ನಿಶ್ಚಯವಾದಾಗ ಹುಡುಗನ ಮನೆಯವರಿಗೆ ಫೋಟೋಗಳನ್ನ ತೋರಿಸಿ ಮದುವೆ ಕಟ್ ಮಾಡಿದ್ದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನ ಹರಿದುಬಿಡುವುದಾಗಿ ಬೆದರಿಕೆ ಹಾಕಿದ್ದಾನೆ.ಸದಾನಂದ ಗೌಡ ಹಾಗೂ ಈತನಿಗೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ದ ನೊಂದ ಯುವತಿ ಪ್ರಕರಣ ದಾಖಲಿಸಿದ್ದಾಳೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *