ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಹುಣಸೂರು,ಜೂ26,Tv10 ಕನ್ನಡ

ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನ
ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಜಾನುವಾರು ಸಾಗಿಸುವ ವಾಹನಗಳ ತಡೆದು ಹಣ ವಸೂಲಿ ದಂಧೆಗಿಳಿದಿದ್ದ ಮಹಿಳೆ ಸೇರಿದಂತೆ ಏಳು ಮಂದಿ ತಂಡವನ್ನ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಕಟ್ಟೆಮಳಲವಾಡಿಯಲ್ಲಿ
ಹಿಂದೂ ರಾಷ್ಟ್ರೀಯ ರಕ್ಷಣಾ ವೇದಿಕೆ ಅಧ್ಯಕ್ಷ ಬೆಂಗಳೂರು ಉತ್ತರಹಳ್ಳಿಯ ರಾಮಕೃಷ್ಣ ಮತ್ತು ಬೆಂಗಳೂರಿನ ವಿವಿಧ ಬಡಾವಣೆ ನಿವಾಸಿಗಳಾದ ಶಿವಕುಮಾರ್, ಲಿಂಗರಾಜು, ಕಿಶೋರ್, ಪ್ರೇಮಕುಮಾರ್, ಪುಷ್ಪಲತಾ ಹಾಗೂ ಕೆ.ಆರ್.ಪೇಟೆ ತಾಲೂಕಿನ ಮಾರಗೌಡನಹಳ್ಳಿಯ ಸ್ವಾಮಿ ಬಂಧಿತರು.
ತಾಲೂಕಿನ ರತ್ನಪುರಿಯ ಕಿರಣ್ ಬುಧವಾರದಂದು ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಕಟ್ಟೆಮಳಲವಾಡಿ ಬಳಿ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀರಾ ಎಂದು ಚಾಲಕ ಕಿರಣ್‌ನನ್ನು ಬೆದರಿಸಿ 25ಸಾವಿರ ರೂ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ನಾನು ವ್ಯವಸಾಯಕ್ಕಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದೇನೆಂದು ಹೇಳಿದರೂ ಕೇಳದೆ ಕೊನೆಗೆ 20 ಸಾವಿರ ಕೊಟ್ಟರೆ ಬಿಡುತ್ತೇವೆ. ಇಲ್ಲದಿದ್ದರೆ ಪೊಲೀಸರಿಗೆ ಮಾಹಿತಿ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.
ಈ ವೇಳೆ ಏನು ನಡೆಯುತ್ತಿದೆ ಎಂದು ರಸ್ತೆಯಲ್ಲಿ ಹೋಗುತ್ತಿದ್ದ ಜನರು ಜಮಾಯಿಸಿದರು. ವಿಷಯ ತಿಳಿದು ಜನರು ಆರೋಪಿಗಳ ವಿರುದ್ದ ತಿರುಗಿ ಬಿದ್ದು ತರಾಟೆ ತೆಗೆದುಕೊಂಡು ಗೂಸಾ ನೀಡಿ 112 ಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಇವರ ಕುತಂತ್ರ ಬಯಲಾಗಿದೆ. ಈ ಸಂಬಂಧ ಕಿರಣ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಹಿಂದೂ ಸಂಘಟನೆ
ಇದೇ ತಂಡ ಕೆ.ಆರ್.ನಗರದಲ್ಲೂ ಗ್ಯಾಸ್ ಅಂಗಡಿಯೊಂದರ ಮಾಲಿಕನನ್ನು ಬೆದರಿಸಿ 20 ಸಾವಿರ ರೂ ಕಿತ್ತಿದ್ದಾರೆ. ಚಾಮರಾಜನಗರದಲ್ಲಿ ಎರಡು ವರ್ಷಗಳ ಹಿಂದೆ ಹಾಗೂ ಬೆಂಗಳೂರಿನಲ್ಲೂ ಇದೀಗ ಹುಣಸೂರು ಮತ್ತು ಕೆ.ಆರ್.ನಗರ ಠಾಣೆಯಲ್ಲಿ ಇವರ ವಿರುದ್ದ ಪ್ರಕರಣ ದಾಖಲಾಗಿದೆ.
ಅಡಿಷನಲ್ ಎಸ್.ಪಿ.ಮಲ್ಲಿಕ್ ಭೇಟಿ ನೀಡಿ ವಿಚಾರಣೆ ನಡೆಸಿದರು. ಡಿವೈಎಸ್‌ಪಿ ಗೋಪಾಲಕೃಷ್ಣ, ಇನ್ಸ್ಪೆಕ್ಟರ್ ಮುನಿಯಪ್ಪ ಹಾಜರಿದ್ದರು.
ಆರೋಪಿಗಳು ಕೃತ್ಯಕ್ಕೆ ಬಳಸುತ್ತಿದ್ದ ಕಾರಿನಲ್ಲಿ ಹಿಂದೂರಾಷ್ಟ್ರ ರಕ್ಷಣಾ ಪಡೆ ನಾಮಫಲಕ ಅಳವಡಿಸಿಕೊಂಡಿದ್ದಲ್ಲದೆಜೆ.ಕೆ.24*7 ಕನ್ನಡ ನ್ಯೂಸ್ ಚಾನಲ್ ಸಿಕ್ಕರ್ ಅಳವಡಿಸಿಕೊಂಡು ವಿವಿಧೆಡೆ ಹಣ ವಸೂಲಿಯನ್ನೇ ದಂದೆ ಮಾಡಿಕೊಂಡಿದ್ದರು. ರಾಮಕೃಷ್ಣ ತನ್ನ ಮೊಬೈಲ್ ನಲ್ಲಿ ಪುನೀತ್ತ್ ಕೆರೆಹಳ್ಳಿ ಜೊತೆ ಇರುವ ಪೊಟೋಗಳನ್ನು ಜಾನುವಾರು ಸಾಗಿಸುವವರಿಗೆ ತೋರಿಸಿ ಬೆದರಿಸುತ್ತಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆಂದು ಹೇಳಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *