
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…540 ಗ್ರಾಂ ಗಾಂಜಾ ವಶ…
- CrimeTV10 Kannada Exclusive
- July 21, 2025
- No Comment
- 51
ನಂಜನಗೂಡು,ಜು21,Tv10 ಕನ್ನಡ
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ನಂಜನಗೂಡು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.ಮೊಹಮ್ಮದ್ ಮಸೂದ್ (30) ಬಂಧಿತ ಆರೋಪಿ.
ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ
ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ.
ಇನ್ಸ್ಪೆಕ್ಟರ್ ಸಿ.ಎಂ ರವೀಂದ್ರ, ಪಿಎಸ್ಐ ಕೃಷ್ಣಕಾಂತಕೋಳಿ ನೇತೃತ್ವದ ತಂಡದಿಂದ ದಾಳಿ ನಡೆಸಿ ಮೊಹಮ್ಮದ್ ಮಸೂದ್ ವಶಕ್ಕೆ ಪಡೆದಿದ್ದಾರೆ.
29 ಪೊಟ್ಟಣಗಳ ಒಟ್ಟು 540 ಗ್ರಾಂ ಗಾಂಜಾ, 550 ರೂ. ನಗದು ಹಾಗೂ ದ್ವಿಚಕ್ರ ವಾಹನ ವಶ ಪಡಿಸಿಕೊಂಡಿದ್ದಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…